ಶಿವಮೊಗ್ಗ

'ಕೆಜೆಪಿ ಸರ್ಕಾರ ರಚಿಸುವುದು ಖಚಿತ'

Published On :

ಕ.ಪ್ರ.ವಾರ್ತೆ ಶಿವಮೊಗ್ಗ ಏ.1
ರಾಜ್ಯದಲ್ಲಿ ಕೆಜೆಪಿ ಹಾಗೂ ಯಡಿಯೂರಪ್ಪ ಅಲೆ ಇದೆ. ವಿಶೇಷವಾಗಿ ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರು ಈ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ. ಆದ್ದರಿಂದ ಮುಂಬರುವ ಚುನಾವಣೆಯಲ್ಲಿ ಕೆಜೆಪಿ ಪಕ್ಷ ಸರ್ಕಾರ  ರಚಿಸುವುದು ಖಚಿತ ಎಂದು ಪಕ್ಷದ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಕೆ. ಮುಕುಡಪ್ಪ ಹೇಳಿದರು.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್‌ನ ದುರಾಡಳಿತ, ಜೆಡಿಎಸ್‌ನ  ವಂಶಪಾರಂಪರ್ಯ ಆಡಳಿತದಿಂದ ಜನ ಬೇಸತ್ತಿದ್ದಾರೆ. ಹಾಗಾಗಿ ಅವರಿಗೆ ಕೆಜೆಪಿ ಆಯ್ಕೆ ಅಗತ್ಯವಾಗಿದೆ. ಜನರು ನಮ್ಮ ಪಕ್ಷದಡೆಗೆ ಒಲವು ತೋರುತ್ತಿದ್ದಾರೆ ಎಂದರು.  ರಾಜ್ಯ ಕಾರ್ಯದರ್ಶಿ ಅನಂತರಾಮಯ್ಯ, ಬಿಜೆಪಿಗೆ ಸಂಸದ ರಾಘವೇಂದ್ರರ ರಾಜಿನಾಮೆ ಕೇಳುವ ಹಕ್ಕು ಇಲ್ಲ. ತಾಕತ್ತಿದ್ದರೆ ಅವರನ್ನು ಉಚ್ಛಾಟಿಸಲಿ ಎಂದು ಸವಾಲು ಹಾಕಿದರು.
ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್ ಅವರು ತಮ್ಮ ಪಕ್ಷದವರು ಪ್ರಶಂಶಿಸಲಿ ಎಂಬ ಕಾರಣದಿಂದಲೇ ರಾಘವೇಂದ್ರ ಅವರನ್ನು ಟೀಕಿಸುತ್ತಾರೆ ಎಂದರು.
ಇಂದು ಸಮಾವೇಶ: ಚುನಾವಣೆ ಘೋಷಣೆಯಾದ ನಂತರ ಇದೇ ಮೊದಲ ಬಾರಿಗೆ ನಗರಕ್ಕೆ ಆಗಮಿಸಲಿರುವ  ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಏ.2ರ ಸಂಜೆ 4 ಗಂಟೆಗೆ ಎನ್‌ಇಎಸ್ ಮೈದಾನದಲ್ಲಿ ನಡೆಯುವ ಕರ್ನಾಟಕ ಜನತಾ ಪಕ್ಷದ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಪಕ್ಷದ ಶಿವಮೊಗ್ಗ ನಗರ  ಹಾಗೂ ಗ್ರಾಮಾಂತರ ಘಟಕಗಳು ಈ ಸಮಾವೇಶ ಆಯೋಜಿಸಿವೆ.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಕೆಜೆಪಿ ನಿಯೋಜಿತ ಅಭ್ಯರ್ಥಿ ಎಸ್. ರುದ್ರೇಗೌಡ ಈ ವಿಷಯ ತಿಳಿಸಿದರು.
ಯಡಿಯೂರಪ್ಪ ಸಮಾವೇಶ ಉದ್ಘಾಟಿಸಲಿದ್ದು, ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಶ್ರೀನಿವಾಸ್, ಮಂಜುನಾಥಗೌಡ, ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಕೆ. ಮುಕುಡಪ್ಪ, ಜಿಲ್ಲಾಧ್ಯಕ್ಷ  ಜ್ಯೋತಿಪ್ರಕಾಶ್, ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಜಿ. ಬಸವಣ್ಯಪ್ಪ ಪಾಲ್ಗೊಳ್ಳಲಿದ್ದಾರೆ. 10 ಸಾವಿರ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ ಎಂದು ರುದ್ರೇಗೌಡ ಹೇಳಿದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.