ಪ್ರಥಮ ಚಿಕಿತ್ಸೆ ಬಗ್ಗೆ ಅರಿವು ಅಗತ್ಯ
ಕ.ಪ್ರ. ವಾರ್ತೆ, ಶಿವಮೊಗ್ಗ, ಏ.1
ಇಂದಿನ ಕಾಲದಲ್ಲಿ ಯಾವ ಸಮಯದಲ್ಲಿ ಏನು ಬೇಕಾದರೂ ಸಂಭವಿಸಬಹುದು, ಆದ್ದರಿಂದ ವಿದ್ಯಾರ್ಥಿ ಜೀವನದಲ್ಲಿ ಪ್ರಥಮ ಚಿಕಿತ್ಸೆ ಮತ್ತು ವಿಪತ್ತು ನಿರ್ವಹಣೆ ಬಗ್ಗೆ ಅಗತ್ಯವಾಗಿ ಅರಿವು ಮೂಡಿಸುವುದು ತುಂಬಾ ಅವಶ್ಯಕ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಸದಸ್ಯ ಡಾ. ವಿ.ಎಲ್.ಎಸ್. ಕುಮಾರ್ ಕಿವಿಮಾತು ಹೇಳಿದರು.
ಕಾಲೇಜು ಶಿಕ್ಷಣ ಇಲಾಖೆ, ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ ಚನ್ನಗಿರಿ, ಭಾರತೀಯ ಯುವ ರೆಡ್ಕ್ರಾಸ್ ಘಟಕದ ಸಂಯುಕ್ತಾಶ್ರಯದಲ್ಲಿ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಒಂದು ದಿನದ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ತರಬೇತಿ ಅವಶ್ಯಕ: ದಿನನಿತ್ಯ ಜೀವನದಲ್ಲಿ ನಮ್ಮ ಸುತ್ತಮುತ್ತ ಸಾಕಷ್ಟು ಘಟನೆಗಳು ನಡೆಯುತ್ತಲಿದ್ದು, ಅದಕ್ಕೆ ಸ್ಥಳದಲ್ಲೆ ಪರಿಹಾರ ಕಂಡುಹಿಡಿಯಲು ವೈದ್ಯಕೀಯ ವಸ್ತುಗಳು ಇರುತ್ತವೆ. ಅವುಗಳ ಬಳಕೆ ಮಾಡುವ ಅರಿವಿನ ಬಗ್ಗೆ ತರಬೇತಿ ತುಂಬಾ ಅವಶ್ಯಕ ಎಂದರು.
ಪರಿಸರ ನಾಶ ಹಾಗೂ ಮಾನವನ ವಿನಾಶಕಾರಿ ಬುದ್ಧಿ ಮತ್ತು ಪ್ರಕೃತಿಯ ವಿಕೋಪದಿಂದ ಸಾಕಷ್ಟು ವಿಪತ್ತುಗಳು ಸಂಭವಿಸುತ್ತವೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜೊತೆಗೆ ಇಂತಹ ಕಾರ್ಯಾಗಾರದಲ್ಲಿ ಭಾಗವಹಿಸಿ ಪರಿಪೂರ್ಣತೆ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಪರಿಹಾರ ಒದಗಿಸಬಹುದು: ಪ್ರಾಚಾರ್ಯ ಪ್ರೊ.ಕೆ.ಟಿ. ಮಂಜುನಾಥ್ ಮಾತನಾಡಿ, ಭೂಕಂಪ, ಸುನಾಮಿ, ಹಾಗೂ ರಸ್ತೆ ಅಪಘಾತಗಳು ಬೇರೆ ಬೇರೆ ಘಟನೆಗಳು ಸಂಭವಿಸಿದಾಗ ವೈದ್ಯರ ಜೊತೆಗೆ ತರಬೇತಿ ಹೊಂದಿದ ವಿದ್ಯಾರ್ಥಿಗಳ ಪಡೆ ಇದ್ದರೆ ತಕ್ಷಣ ಪರಿಹಾರ ಒದಗಿಸಬಹುದು ಎಂದು ಅಭಿಪ್ರಾಯಪಟ್ಟರು.
ವೇದಿಕೆಯಲ್ಲಿ ಯುವ ರೆಡ್ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಡಿ. ಶಿವಕುಮಾರ್, ರೋಟರಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಜಿ. ವಿಜಯ್ಕುಮಾರ್ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ವಿತರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

