5ರಿಂದ ಚಂದ್ರೇಗೌಡರ ನಾಟಕೋತ್ಸವ
ಕ.ಪ್ರ.ವಾರ್ತೆ, ಶಿವಮೊಗ್ಗ, ಏ.2
ಹೊಂಗಿರಣ ಸಂಸ್ಥೆ ಏಪ್ರಿಲ್ 5, 6 ಮತ್ತು 7ರಂದು ಪ್ರತಿ ನಿತ್ಯ ಸಂಜೆ 6.45ಕ್ಕೆ ಕುವೆಂಪು ರಂಗಮಂದಿರದಲ್ಲಿ ಬಿ. ಚಂದ್ರೇಗೌಡರ ನಾಟಕೋತ್ಸವ ಹಮ್ಮಿಕೊಂಡಿದೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ರಂಗ ನಿರ್ದೇಶಕ ಡಾ. ಸಾಸ್ವೇಹಳ್ಳಿ ಸತೀಶ್, ಏ.5ರಂದು ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ನಾಟಕೋತ್ಸವ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಹರಿಕುಮಾರ್, ಶಿವಕುಮಾರ ರಂಗ ಪ್ರಯೋಗ ಶಾಲೆಯ ಪ್ರಾಂಶುಪಾಲ ನಟರಾಜ್ ಹೊನ್ನವಳ್ಳಿ ಪಾಲ್ಗೊಳ್ಳಲಿದ್ದಾರೆ ಎಂದರು.
ಕಲ್ಲು ಕರಗುವ ಸಮಯ: 5ರಂದು ಸಾಗರದ ಸ್ಪಂದನ ಸಂಸ್ಥೆಯಿಂದ ಕಲ್ಲು ಕರಗುವ ಸಮಯ ನಾಟಕ ಪ್ರದರ್ಶನಗೊಳ್ಳಲಿದ್ದು, ಪ್ರತಿಭಾ ರಾಘವೇಂದ್ರ ನಾಟಕ ನಿರ್ದೇಶಿಸಲಿದ್ದಾರೆ. 6ರಂದು ಹೊಂಗಿರಣ ತಂಡದಿಂದ ಕಡಿದಾಳು ಶಾಮಣ್ಣ ಜೀವನಾಧರಿತ ನಾಟಕ ಪ್ರದರ್ಶನಗೊಳ್ಳಲಿದೆ.
ಇದೇ ವೇಳೆ ಪ್ರೊ. ನಂಜುಂಡಸ್ವಾಮಿಯವರ ಹೋರಾಟ, ಚಿಂತನೆ ಕುರಿತ ಹಸಿರು ಸೇನಾನಿ ಪುಸ್ತಕ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಅಧ್ಯಕ್ಷತೆಯನ್ನು ಕಡಿದಾಳು ಶಾಮಣ್ಣ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ನಟರಾಜ ಹುಳಿಯಾರ್, ಲೇಖಕ ಶ್ರೀನಿವಾಸ್ ಕರಿಯಪ್ಪ ಉಪಸ್ಥಿತರಿರುವರು ಎಂದು ತಿಳಿಸಿದರು.
ಏ.7ರಂದು ನಮ್ ಟೀಮ್‌ನಿಂದ ಗಿರೀಶ್ ನಿರ್ದೇಶನದ ಬಯಲು ಸೀಮೆಕಟ್ಟಿ ಪುರಾಣ ನಾಟಕ ಪ್ರದರ್ಶನಗೊಳ್ಳಲಿದ್ದು, ಸಮಾರೋಪ ಸಮಾರಂಭ ನಡೆಯಲಿದೆ.
ರಂಗಾಯಣ ನಿರ್ದೇಶಕ ಹೊ.ನ. ಸತ್ಯ ಹಾಗೂ ಮಾಜಿ ವಿಧಾನಸಭಾ ಸದಸ್ಯ ಕೋಣಂದೂರು ಲಿಂಗಪ್ಪ ಉಪಸ್ಥಿತರಿರುವರು ಎಂದರು. ಇದೇ ವೇಳೆ ಅಜ್ಜಂಪುರ ಕೃಷ್ಣಮೂರ್ತಿ ಅವರು ಸಂಗ್ರಹಿಸಿರುವ ರಂಗ ದಾಖಲಾತಿ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ.
ಗೋಷ್ಠಿಯಲ್ಲಿ ಹೊಂಗಿರಣ ತಂಡದ ಗೌರವಾಧ್ಯಕ್ಷ ಧನಶೇಖರಯ್ಯ, ಚಂದ್ರೇಗೌಡ, ಗೋಪಾಲಸ್ವಾಮಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

