ಫ್ರಾನ್ಸಿಸ್ ಡಿಸೋಜರ ಸ್ಪೀಕಿಂಗ್ ಇಂಗ್ಲಿಷ್ ಪುಸ್ತಕ ಬಿಡುಗಡೆ
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದ ಸಂಶೋಧಕ ಫ್ರಾನ್ಸಿಸ್ ಡಿಸೋಜ ಅವರು ಬರೆದಿರುವ ಸ್ಪೀಕಿಂಗ್ ಇಂಗ್ಲಿಷ್ ಎಂಬ ಪುಸ್ತಕ ಬಿಡುಗಡೆಗೊಂಡಿದೆ.
ನಗರದ ಎಡ್ಯುರೈಟ್ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಅತಿಥಿ ಉಪನ್ಯಾಸಕ ಪ್ರೊ. ಡೇವಿಡ್ ಬಾಂಡ್ ಪುಸ್ತಕ ಬಿಡುಗಡೆಗೊಳಿಸಿದರು.
ನಂತರ ಕಾರ್ಯಕ್ರಮ ಉದ್ಧೇಶಿಸಿ ಮಾತನಾಡಿದ ಅವರು, ಈ ಪುಸ್ತಕದಲ್ಲಿ ಪರಿಚಯಿಸಿರುವ ಇಂಗ್ಲಿಷ್ ಆಲಿಸುವಿಕೆ ಮತ್ತು ಬರವಣಿಗೆಯ ವಿಚಾರಗಳು, ವ್ಯಾಕರಣ, ಇಂಗ್ಲಿಷ್ ಕಲಿಕಾ ವಿದ್ಯಾರ್ಥಿಗಳಿಗೆ ತುಂಬ ಉಪಯುಕ್ತವಾಗಿದೆ ಎಂದರು. ಲೇಖಕ ಫ್ರಾನ್ಸಿಸ್ ಡಿಸೋಜ ಮಾತನಾಡಿದರು. ಕಾರ್ಯಕ್ರಮದಲ್ಲಿ ಬೆಂಗಳೂರಿನ ಕ್ಯಾನನ್ ಲಾ, ಅತಿಥಿ ಉಪನ್ಯಾಸಕ ಫಾ. ಆಲ್ವಿನ್ ಸೆರಾಮೊ, ಪ್ರೊ. ರಾಮಪ್ರಸಾದ, ಡಾ. ಶಂಕರನಾರಾಯಣ್, ರೇಷ್ಮಾ ಡಿಸೋಜ, ಪಲ್ಲವಿ, ಕುಶಲ್, ದೀಕ್ಷಾ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

