ಬಸವನಹೊಳೆ ಡ್ಯಾಂ ಹೂಳು ತೆಗೆಸುವಂತೆ ಮನವಿ
ಸಾಗರ: ಪಟ್ಟಣಕ್ಕೆ ನೀರು ಪೂರೈಸುವ ಬಸವನಹೊಳೆ ಡ್ಯಾಮಿನ ಹೂಳು ತೆಗೆಸಬೇಕು ಹಾಗೂ ಗೇಟುಗಳನ್ನು ದುರಸ್ತಿ ಮಾಡಿಸಬೇಕು ಎಂದು ಒತ್ತಾಯಿಸಿ ಗುರುವಾರ ಮಲೆನಾಡು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಹಿಂದಿನ ಬಿಜೆಪಿ ಆಡಳಿತದ ಮುಂದಾಲೋಚನೆ ಕೊರತೆಯಿಂದಾಗಿ ಪಟ್ಟಣದ ಜನರು ಈಗ ನೀರಿನ ಸಮಸ್ಯೆ ಎದುರಿಸುವಂತಾಗಿದೆ. ನೀರು ಪೂರೈಸುವ ಬಸವನಹೊಳೆ ಡ್ಯಾಂ ಪೂರ್ಣ ಹೂಳು ತುಂಬಿದ್ದು, ವರ್ಷದಿಂದ ವರ್ಷಕ್ಕೆ ನೀರಿನ ಸಂಗ್ರಹಮಟ್ಟ ಕುಸಿಯುತ್ತಿದೆ. ವೇದಿಕೆ ವತಿಯಿಂದ ಹಲವಾರು ಬಾರಿ ಹೂಳು ತೆಗೆಯುವ ಮೂಲಕ ನೀರು ಸಂಗ್ರಹ ಮಟ್ಟವನ್ನು ಹೆಚ್ಚಿಸುವಂತೆ ಮನವಿ ಸಲ್ಲಿಸಿದ್ದರೂ ಆಡಳಿತ ನಡೆಸುವವರು ಗಮನ ನೀಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ದುರಸ್ತಿಗೆ ಒತ್ತಾಯ: ಬಸವನಹೊಳೆ ಡ್ಯಾಂನಲ್ಲಿ ನೀರು ಹರಿಸಲು ನಿರ್ಮಿಸಿರುವ ಕಬ್ಬಿಣದ ಗೇಟುಗಳು ಪೂರ್ಣ ಶಿಥಿಲಗೊಂಡಿದ್ದು, ನೀರು ಪೋಲಾಗುತ್ತಿದೆ. ತಕ್ಷಣ ಗೇಟುಗಳನ್ನು ದುರಸ್ತಿಪಡಿಸುವ ನಿಟ್ಟಿನಲ್ಲಿ ಆಡಳಿತಾಧಿಕಾರಿಗಳು ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು.
ಹೊರ ಬಡಾವಣೆಗಳ ನಿವಾಸಿಗಳು ನೀರಿಲ್ಲದೆ ಪರಿತಪಿಸುವಂತೆ ಆಗಿದೆ. ತಕ್ಷಣ ನಗರಸಭೆ ವತಿಯಿಂದ ಟ್ಯಾಂಕರ್ಗಳ ಮೂಲಕ ನೀರು ಸರಬರಾಜಿಗೆ ಗಮನಹರಿಸಬೇಕು ಎಂದು ಆಗ್ರಹಿಸಿದರು. ವೇದಿಕೆ ಪದಾಧಿಕಾರಿಗಳು, ಪ್ರಮುಖರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

