ಸಂಚಾರಿ ನಿಯಮ ಪಾಲಿಸದಿರುವುದೇ ಅಪಘಾತಕ್ಕೆ ಕಾರಣ: ಬಣಕಾರ್
ಕ.ಪ್ರ. ವಾರ್ತೆ, ಶಿವಮೊಗ್ಗ, ಏ.4
ಪ್ರಸ್ತುತ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸಂಚಾರಿ ನಿಯಮಗಳನ್ನು ಪ್ರತಿಯೊಬ್ಬ ವಾಹನ ಸವಾರರು ಪಾಲಿಸಲೇಬೇಕು ಎಂದು ಹಿರಿಯ ಮೋಟಾರು ವಾಹನ ನಿಯಂತ್ರಣ ಅಧಿಕಾರಿ ಎಸ್.ಜಿ. ಬಣಕಾರ್ ಹೇಳಿದರು.
ಕುವೆಂಪು ವಿಶ್ವವಿದ್ಯಾನಿಲಯ, ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು ಆಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಯುವ ರೆಡ್ಕ್ರಾಸ್ ಘಟಕ ಉದ್ಘಾಟನಾ, ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂಚಾರಿ ನಿಯಮಗಳನ್ನು ಸಾರ್ವಜನಿಕರು ಪಾಲಿಸದಿರುವುದೇ ಬಹುತೇಕ ಅಪಘಾತಗಳಿಗೆ ಕಾರಣ. ಹೆಚ್ಚಾಗಿ ವಿದ್ಯಾರ್ಥಿಗಳೇ ಸಂಚಾರಿ ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ದಾಖಲೆ ಜತೆಯಲ್ಲಿರಲಿ: ಪ್ರತಿಯೊಬ್ಬ ವಾಹನ ಸವಾರರು, ಚಾಲನ ಪರವಾನಗಿ ಪತ್ರ, ವಾಹನ ವಿಮೆ, ವಾಹನದ ಮೂಲ ದಾಖಲಾತಿಗಳೊಂದಿಗೆ ವಾಹನ ಚಾಲನೆ ಮಾಡಬೇಕು. ಅದರೊಂದಿಗೆ ತಮ್ಮ ಸುರಕ್ಷತೆಯನ್ನು ಮನಗಂಡು ವಾಹನ ಚಾಲನೆ ಮಾಡಬೇಕು ಎಂದ ಅವರು, ವಿದ್ಯಾರ್ಥಿಗಳು ವೇಗವಾಗಿ ಬೈಕ್ ಚಾಲನೆ ಮಾಡುವುದು ಅಪಘಾತಕ್ಕೆ ಎಡೆಮಾಡಿಕೊಡುತ್ತದೆ. ನಿಧಾನವಾಗಿ ಕ್ರಮಿಸುವುದರಿಂದ ಯಾವುದೇ ಅಪಘಾತ ನಡೆಯುವುದಿಲ್ಲ ಎಂದರು.
ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿದ್ದು, ಸಂಚಾರಿ ನಿಯಮಗಳನ್ನು ಪಾಲಿಸದವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಅವಶ್ಯಕತೆಗನುಗುಣವಾಗಿ ವಾಹನಗಳನ್ನು ಉಪಯೋಗಿಸಿಕೊಳ್ಳಬೇಕು, ದುಂದು ವೆಚ್ಚಕ್ಕೆ ಅವಕಾಶ ನೀಡಬಾರದು. ಸಂಚಾರಿ ಅಧಿಕಾರಿಗಳು ವಾಹನ ತಪಾಸಣೆ ಮಾಡುವಾಗ ಯುವಕರು ಅಧಿಕಾರಿಗಳಿಂದ ತಪ್ಪಿಸಿಕೊಳ್ಳಲು ವೇಗವಾಗಿ ಚಾಲನೆ ಮಾಡಿ ಅಪಘಾತಕ್ಕಿಡಾಗುತ್ತಾರೆ. ಕಳೆದ ಕೆಲ ದಿನಗಳ ಹಿಂದೆ ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ನಡೆದ ಅಪಘಾತವೇ ಕಾರಣ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

