ಶಿವಮೊಗ್ಗ

ಸಾಗರ: ನೀರಿನ ಪರಿಷ್ಕೃತ ದರ ಜಾರಿ

Published On :

ಸಾಗರ: ಇಲ್ಲಿನ ನಗರಸಭೆ ವ್ಯಾಪ್ತಿಯಲ್ಲಿ ಬರುವ ಕುಡಿಯುವ ನೀರಿನ ನಲ್ಲಿ ಸಂಪರ್ಕ ಹೊಂದಿರುವವರಿಗೆ ಸರ್ಕಾರದ ಆದೇಶದಂತೆ ಏಪ್ರಿಲ್-2013ರಿಂದ ಪರಿಷ್ಕೃತ ದರವನ್ನು ಜಾರಿಗೆ ತರಲಾಗಿದೆ. ಗೃಹ ಬಳಕೆ ದರ 120, ವಾಣಿಜ್ಯ ಹಾಗೂ ಕೈಗಾರಿಕೆ ಬಳಕೆಗೆ 480, ಗೃಹೇತರ ಬಳಕೆಗೆ 240 ನಿಗದಿಪಡಿಸಲಾಗಿದೆ.
ಈಗಾಗಲೇ ಕುಡಿಯುವ ನೀರಿನ ಕೊಳಾಯಿ ಸಂಪರ್ಕ ಹೊಂದಿರುವ ಬಳಕೆದಾರರು ಸರ್ಕಾರದ ಆದೇಶದಂತೆ ಐಎಸ್‌ಐ ಗುರುತಿನ ವಾಟರ್ ಮೀಟರ್‌ಗಳನ್ನು ತಮ್ಮ ಸ್ವಂತ ಖರ್ಚಿನಲ್ಲಿ ಅಳವಡಿಸಿಕೊಂಡು ನಗರಸಭೆಗೆ ವರದಿ ನೀಡತಕ್ಕದ್ದು. ಮೀಟರ್ ಅಳವಡಿಕೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಲ್ಲಿ ಸರ್ಕಾರದ ಆದೇಶದಂತೆ ಕನಿಷ್ಠ ದರಗಳ ಮೇಲೆ ಶೇ. 25ರಷ್ಟು ಮೊತ್ತವನ್ನು ನೋಟಿಸ್ ನೀಡಿ ಆರು ತಿಂಗಳ ನಂತರ ವಿಧಿಸಲಾಗುವುದು. ಶೇ. 50ರಷ್ಟು ಮೊತ್ತವನ್ನು ಒಂದು ವರ್ಷದ ನಂತರ ಹೆಚ್ಚುವರಿಯಾಗಿ ವಿಧಿಸಲಾಗುವುದು ಎಂದು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.