ಎಲ್ಲಾ ಕ್ರೀಡೆಗಳನ್ನು ಪ್ರೋತ್ಸಾಹಿಸಿ
ಕ.ಪ್ರ ವಾರ್ತೆ, ಶಿವಮೊಗ್ಗ, ಏ.5
ಪ್ರಸ್ತುತ ಕ್ರೀಡೆಗಳಲ್ಲಿ ಕ್ರಿಕೆಟ್ಗೆ ಮಾತ್ರ ಹೆಚ್ಚು ಪ್ರೋತ್ಸಾಹ ಸಿಗುತ್ತಿದೆ. ಇತರೆ ಕ್ರೀಡೆಗಳನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ರಾಷ್ಟ್ರೀಯ ಫುಟ್ಬಾಲ್ ತರಬೇತುದಾರ ಮಹಮ್ಮದ್ ದಾದಾಪೀರ್ ವಿಷಾದಿಸಿದರು.
ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಚಂದನ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಕ್ರೀಡಾ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ಕ್ರೀಡಾ ಪ್ರೋತ್ಸಾಹಕರು ಕ್ರಿಕೆಟ್ ಒಂದನ್ನೇ ಉತ್ತಮ ಕ್ರೀಡೆ ಎಂದು ಭಾವಿಸುತ್ತಾರೆ. ಆದರೆ, ಕ್ರಿಕೆಟ್ನೊಂದಿಗೆ ಇತರೆ ಫುಟ್ಬಾಲ್, ಹಾಕಿ, ಟೆನ್ನಿಸ್ ಮತ್ತಿತರ ಕ್ರೀಡೆಗಳು ಕೂಡ ಹೆಚ್ಚು ಜನಪ್ರಿಯಗೊಂಡಿವೆ. ಅದರೂ ಅವುಗಳಿಗೆ ಪ್ರೋತ್ಸಾಹ ಸಿಗದಿರುವುದು ವಿಷಾದನೀಯ ಎಂದರು.
ಕ್ರೀಡೆಯಲ್ಲಿ ಭಾಗವಹಿಸಿ: ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡರೆ ವಿಶ್ವದಲ್ಲೇ ಅಗ್ರಗಣ್ಯ ಸ್ಥಾನಕ್ಕೇರಲು ಸಾಧ್ಯ. ಆದ್ದರಿಂದ ಕ್ರೀಡಾಪಟುಗಳು ವಿದ್ಯಾರ್ಥಿ ಜೀವನದಲ್ಲೇ ಸಾಧ್ಯವಾದಷ್ಟು ಹೆಚ್ಚಿನ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಪ್ರತಿಯೊಂದು ಕ್ರೀಡೆಗೆ ತನ್ನದೇ ಆದ ಸ್ಥಾನಮಾನವಿರುತ್ತದೆ. ಅದೇ ರೀತಿ ಎಲ್ಲಾ ಕ್ರೀಡೆಗಳನ್ನು ಒಂದೇ ರೀತಿಯಲ್ಲಿ ಪ್ರೋತ್ಸಾಹಿಸುವ ಅಗತ್ಯವಿದೆ ಎಂದರು.
ಕ್ರೀಡೆಯಲ್ಲಿ ಆಸಕ್ತಿ ಇದ್ದರೆ ಏನನ್ನಾದರೂ ಸಾಧಿಸಲು ಸಾಧ್ಯ. ಕ್ರೀಡೆಯಿಂದ ವ್ಯಕ್ತಿ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಬಹುದು. ಕ್ರೀಡೆಯೊಂದಿಗೆ ವಿದ್ಯಾಭ್ಯಾಸದಲ್ಲಿಯೂ ಹೆಚ್ಚಿನ ಆಸಕ್ತಿ ಹೊಂದುವುದರಿಂದ ಉತ್ತಮ ಭವಿಷ್ಯವಿದೆ ಎಂದು ತಿಳಿಸಿದರು. ಎನ್ಇಎಸ್ನ ಖಂಜಾಚಿ ಅಶ್ವತ್ಥ ನಾರಾಯಣ ಶೆಟ್ಟಿ, ವಾಸುದೇವ್, ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಎ. ನಾಗರಾಜ್ ಇದ್ದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

