ಶಿವಮೊಗ್ಗ

10ರಂದು ಬೇಳೂರು ಜೆಡಿಎಸ್‌ಗೆ ಸೇರ್ಪಡೆ

Published On :

ಕ.ಪ್ರ ವಾರ್ತೆ, ಹೊಸನಗರ, ಏ.7
ಬದಲಾದ ರಾಜಕೀಯ ಸನ್ನಿವೇಶದಲ್ಲಿ ಸಾಗರ ಕ್ಷೇತ್ರದ ಶಾಸಕ ಬೇಳೂರು ಏ.10ರಂದು ಜೆಡಿಎಸ್ ಸೇರಲಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸಾಗರದಿಂದ ಸ್ಪರ್ಧಿಸುವುದು ಬಹುತೇಕ ಖಾತ್ರಿಯಾಗಿದೆ.
 ಕನ್ನಡಪ್ರಭದೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಸೇರ್ಪಡೆಗೆ ಪಕ್ಷದ ಮುಖಂಡರಿಂದ ಗ್ರೀನ್ ಸಿಗ್ನಲ್ ದೊರೆತಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಜೆಡಿಎಸ್ ಸೇರಲು ತೀರ್ಮಾನಿಸಲಾಗಿದೆ. ಏ.10 ಬುಧವಾರ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಗೆಲುವು ನನ್ನದೇ: ಸಾಗರ ಕ್ಷೇತ್ರದಿಂದ ಎರಡು ಬಾರಿ ಆಯ್ಕೆಯಾಗಿರುವ ನನಗೆ ಜನರ ನಾಡಿಮಿಡಿತ ಚೆನ್ನಾಗಿ ಗೊತ್ತಿದೆ. ಹಿಂದಿನ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ನಾನು ತಟಸ್ಥವಾಗಿ ಉಳಿದ ಕಾರಣ ಕಾಂಗ್ರೆಸ್‌ಗೆ ಹೆಚ್ಚಿನ ಸ್ಥಾನಗಳು ಲಭಿಸಿದೆ. ಆದರೆ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ನನ್ನದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನನ್ನನ್ನು ರಾಜಕೀಯವಾಗಿ ಮುಗಿಸುವ ಕುತಂತ್ರವನ್ನು ಕೆಲವು ಸ್ಥಾಪಿತ ಹಿತಾಸಕ್ತಿಗಳು ಮಾಡುತ್ತಲೇ ಇದೆ. ಮುಂಬರುವ ಚುನಾವಣೆಯಲ್ಲಿ ಜನತೆ ನನಗೆ ಮತ್ತೊಮ್ಮೆ ಆಶೀರ್ವದಿಸುವ ಮೂಲಕ ಅವರಿಗೆ ಪಾಠ ಕಲಿಸಲಿದ್ದಾರೆ ಎಂಬ ವಿಶ್ವಾಸವಿದೆ. ಜೆಡಿಎಸ್‌ಗೆ ಸೇರ್ಪಡೆಗೊಂಡ ನಂತರ ಕ್ಷೇತ್ರಕ್ಕೆ ಆಗಮಿಸಲಿದ್ದು ಪಕ್ಷ ಸಂಘಟನೆ ಮಾಡುತ್ತೇನೆ ಎಂದರು.
ಸಾಗರ ಕ್ಷೇತ್ರದಿಂದ ಸ್ಪರ್ಧಿಸುವುದು ಶತಸಿದ್ಧ. ಇದರಲ್ಲಿ ನಮ್ಮ ಅಭಿಮಾನಿಗಳು ಮತ್ತು ಕಾರ್ಯಕರ್ತರು ಗೊಂದಲಕ್ಕೀಡಾಗುವುದು ಬೇಡ. ಕ್ಷೇತ್ರದಲ್ಲಿ ಹಿಂದೆಂದು ಕಂಡರಿಯದಷ್ಟು ಅಭಿವೃದ್ಧಿ ಕೆಲಸಗಳು ನನ್ನ  ಅವಧಿಯಲ್ಲಾಗಿದ್ದು ಅದುವೇ ಶ್ರೀರಕ್ಷೆಯಾಗಲಿದೆ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.