ಶಿವಮೊಗ್ಗ

ಬಿಜೆಪಿ ಚುನಾವಣಾ ಕಚೇರಿ ಉದ್ಘಾಟನೆ

Published On :

ಶಿವಮೊಗ್ಗ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯು ನೂತನವಾಗಿ ಸಜ್ಜುಗೊಳಿಸಿರುವ ಚುನಾವಣಾ ಕಚೇರಿ ಭಾನುವಾರ ವಿದ್ಯುಕ್ತವಾಗಿ ಉದ್ಘಾಟನೆಗೊಂಡಿತು.
 ಹಾಲಿ ಇರುವ ಜಿಲ್ಲಾ ಬಿಜೆಪಿ ಕಚೇರಿ ಹಿಂಭಾಗದ ವಿಸ್ತಾರ ನಿವೇಶನದಲ್ಲಿ ಶೆಡ್ ನಿರ್ಮಿಸಲಾಗಿದ್ದು, ಇಲ್ಲಿ ಚುನಾವಣಾ ಚಟುವಟಿಕೆಗಳು, ಸಭೆಗಳು, ಪೂರ್ವತಯಾರಿಗಳು ನಡೆಯುತ್ತವೆ.
   ಭಾನುವಾರ ಬೆಳಿಗ್ಗೆ ಲಕ್ಷ್ಮೀನಾರಾಯಣ ಭಟ್ಟ ನೇತೃತ್ವದ ಪುರೋಹಿತರ ತಂಡ ಸಾವಿರ ಮೋದಕ ಗಣಹೋಮ ನೆರವೇರಿಸಿತು.
   ಹೋಮದ ಪೂರ್ಣಾಹುತಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಪಟ್ಟಾಭಿರಾಮ, ವಿಧಾನಪರಿಷತ್ ಸದಸ್ಯರಾದ ಎಂ.ಬಿ. ಭಾನುಪ್ರಕಾಶ್, ಸಿದ್ದರಾಮಣ್ಣ, ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಮತ್ತಿತರರು ಪಾಲ್ಗೊಂಡಿದ್ದರು.
 ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಸಂಘಟನಾ ಕಾರ್ಯದರ್ಶಿ ದತ್ತಾತ್ರಿ, ಚುನಾವಣಾ ಚಟುವಟಿಕೆಯನ್ನು ವ್ಯವಸ್ಥಿತವಾಗಿ ನಡೆಸುವ ಉದ್ದೇಶದಿಂದ ವಿಸ್ತೃತ ಕಚೇರಿಯನ್ನು ಸಿದ್ಧಪಡಿಸಲಾಗಿದ್ದು, ಇದಕ್ಕೆ ಸಹಕರಿಸಿದ ಕಾರ್ಯಕರ್ತರನ್ನು ಸ್ಮರಿಸುವುದಾಗಿ ತಿಳಿಸಿದರು.
   ನೂತನ ಚುನಾವಣಾ ಕಚೇರಿಯ ಶಂಕುಸ್ಥಾಪನೆ ಸಂದರ್ಭದಲ್ಲಿ ಪಕ್ಷ ಒಂದು ನಿರ್ಧಾಕೈಗೊಂಡಿತ್ತು, ಪಕ್ಷದ ಕಾರ್ಯಕರ್ತರು, ಹಿತೈಶಿಗಳ ಹಣದಿಂದಲೇ ಕಟ್ಟಡ ನಿರ್ಮಿಸಬೇಕೆಂಬ ಕಲ್ಪನೆ ಇತ್ತು. ಅದರಂತೆ ಅನೇಕರು ದೇಣಿಗೆ ನೀಡಿದರು ಎಂದು ತಿಳಿಸಿದರು.
 ಇದೇ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಮಣ್ಣ 25 ಸಾವಿರ ರುಪಾಯಿ ನೀಡಿದರೆ, ಸೊರಬದ ಬಿಜೆಪಿ ಮುಖಂಡ ಹುಲ್ತಿಕೊಪ್ಪ ಶ್ರೀಧರ್ 25 ಸಾವಿರ ರುಪಾಯಿ ನೀಡುವುದಾಗಿ ವಾಗ್ದಾನ ಮಾಡಿದರು.   
   ಪಕ್ಷದ ಚನ್ನಬಸಪ್ಪ, ಸುಭಾಷ್, ಗಿರೀಶ್ ಪಟೇಲ್, ಹೊನ್ನಪ್ಪ, ಮಧುಸೂಧನ್, ಅಣ್ಣಪ್ಪ ಮೊದಲಾದವರು ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ  ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.