ಮದ್ಯ ಸಾಗಿಸುತ್ತಿದ್ದ ಆರೋಪಿ ಬಂಧನ
ಕ.ಪ್ರ ವಾರ್ತೆ, ಶಿವಮೊಗ್ಗ, ಏ.7
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ ಪರವಾನಗಿ ಇಲ್ಲದೆ ಮದ್ಯ ಸಾಗಿಸುತ್ತಿದ್ದ ಪ್ರಕರಣವನ್ನು ಅಬಕಾರಿ ಇಲಾಖೆ ತಂಡ ಬೇಧಿಸಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.
ಏ.7ರಂದು ಬೆಳಗಿನ ಜಾವ 12.15ರ ಸಮಯದಲ್ಲಿ ಭದ್ರಾವತಿ ತಾಲೂಕು ಹಳೇ ಜೇಡಿಕಟ್ಟೆ (ಬಿ.ಎಚ್.ರಸ್ತೆ) ಸಮೀಪ ಯಾವುದೇ ರಹದಾರಿ ಪರವಾನಗಿ ಇಲ್ಲದೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಮಾರುತಿ ಓಮ್ನಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ತಡೆದು ನಿಲ್ಲಿಸಿದ್ದಾರೆ.
ವಾಹನ ತಪಾಸಣೆ ನಡೆಸಿದಾಗ ವಾಹನದಲ್ಲಿ 259.200 ಲೀಟರ್ ಮದ್ಯ ಹಾಗೂ 31,680 ಲೀಟರ್ ಬಿಯರ್ ಇತ್ತು. ಆರೋಪಿಗಳಾದ ಸಂದೀಪ ಮತ್ತು ಸಿದ್ದರಾಮ ಎಂಬವರನ್ನು ದಸ್ತಗಿರಿ ಮಾಡಲಾಗಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ವಾಹನ ವಶಕ್ಕೆ ಪಡೆಯಲಾಗಿದೆ. ಒಟ್ಟಾರೆ ಮದ್ಯ ಹಾಗೂ ವಾಹನ ಸೇರಿ ಒಟ್ಟು # 2.75 ಲಕ್ಷ ರುಪಾಯಿ ಮೌಲ್ಯ ಎಂದು ಅಂದಾಜಿಸಲಾಗಿದೆ.
ಜಿಲ್ಲಾ ಅಬಕಾರಿ ಉಪ ಆಯುಕ್ತ ಎಸ್.ಎಲ್. ರಾಜೇಂದ್ರ ಪ್ರಸಾದ್ ನಿರ್ದೇಶನದಂತೆ ಭದ್ರಾವತಿ ವಲಯ ಕಚೇರಿ ಅಬಕಾರಿ ನಿರೀಕ್ಷಕ ಎಸ್. ಧರಣಿ ಕುಮಾರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದು, ಸಿಬ್ಬಂದಿ ಟಿ. ಈಶ್ವರ್, ಮಲ್ಲಿಕಾರ್ಜುನ, ರವೀಂದರ್ ಹಾಗೂ ವಾಹನ ಚಾಲಕ ಮೋಹನ್ ಕಾರ್ಯಾಚರಣೆ ತಂಡದಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

