ಶಿವಮೊಗ್ಗ

ಕಾಂಗ್ರೆಸ್ ಸಭೆ ವಿರುದ್ಧ ಚುನಾವಣಾ ಆಯೋಗ ದೂರು ದಾಖಲು

Published On :

ಶಿರಾಳಕೊಪ್ಪ: ಶಿರಾಳಕೊಪ್ಪ ಹತ್ತಿರದ ನೇರಲಗಿ ಸಮುದಾಯ ಭವನದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಸಭೆಯಲ್ಲಿ ನೀತಿಸಂಹಿತೆ ಉಲ್ಲಂಘನೆ ಆಗಿರುವ ಕುರಿತು ಚುನಾವಣಾ ಆಯೋಗ ದೂರು ದಾಖಲಿಸಿಕೊಂಡಿದೆ.
ಇದೇ ಸಂದರ್ಭದಲ್ಲಿ ಪತ್ರಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಶಿರಾಳಕೊಪ್ಪ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಯಿತು. ಪಟ್ಟಣದ ಹೊರವಲಯದ ನೇರಲಗಿ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ನಡೆದ ಕಾಂಗ್ರೆಸ್ ಸಭೆಗೆ ಪತ್ರಕರ್ತರು ಸಭೆಯ ವರದಿ ಮಾಡಲು ಹೋಗಿದ್ದರು.
ಪತ್ರಕರ್ತರ ಖಂಡನೆ: ಸಭೆ ನಡೆದು ಹೊರಬರುವಾಗ ಪಕ್ಷದ ಕಾರ್ಯಕರ್ತರು ತಮ್ಮ ಪಕ್ಷದ ಕಾರ್ಯಕರ್ತರಿಗೆ ತಿಂಡಿಕಾಫಿ ಟೋಕನ್ ಕೊಡುವಾಗ ನೂಕುನುಗ್ಗಲು ಉಂಟಾಯಿತು. ಇದನ್ನು ಪೋಟೋ ತೆಗೆದಾಗ ಕಾರ್ಯಕರ್ತರು ಕ್ಯಾಮರಾ ಕಿತ್ತುಕೊಳ್ಳಲು ಯತ್ನಿಸಿದಾಗ ಅದನ್ನು ಖಂಡಿಸಿ ಪತ್ರಕರ್ತರು ಸಭೆಯಿಂದ ಹೊರನಡೆದರು.
ನಂತರ ಶಿರಾಳಕೊಪ್ಪ ಪಟ್ಟಣದ ಹೋಟೆಲ್ ಒಂದರಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ತಿಂಡಿತಿನ್ನುವುದನ್ನು ಫೋಟೋ ತೆಗೆಯಲು ಯತ್ನಿಸಿದ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದರು.
ಜನಸೇವೆ ಗುರಿ: ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಶಾಂತವೀರಪ್ಪಗೌಡ ತಾವು  ಎಂದೂ ಅಧಿಕಾರದ ಬೆನ್ನು ಹತ್ತಿದವರಲ್ಲ. ಹಾಗೆಯೇ ಚುನಾವಣೆಗೆ ನಿಂತು ಗೆಲ್ಲುವದು ನನ್ನ ಸ್ವಂತಕ್ಕಲ್ಲ, ಹಣ ಮಾಡಬೇಕು ಎಂಬ ಉದ್ದೇಶವೂ ಇಲ್ಲ, ಜನರಿಗೆ ಕೈಲಾದ ಸೇವೆ ಮಾಡಬೇಕೆಂದು ಬಯಸಿದ್ದೇನೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.