ಶಿವಮೊಗ್ಗ

ಇಂದು ಸ್ವಾಭಿಮಾನಿ ಕನ್ನಡಿಗರ ಸಮಾವೇಶ

Published On :

ಶಿವಮೊಗ್ಗ: ಕನ್ನಡಿಗರ ಜನಪರ ವೇದಿಕೆಯಿಂದ ಏ.9ರಂದು ಸ್ವಾಭಿಮಾನಿ ಕನ್ನಡಿಗರ ಸಮಾವೇಶವನ್ನು ನಗರದ ಕುವೆಂಪು  ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆ ರಾಜ್ಯಾಧ್ಯಕ್ಷ ಎಂ.ಡಿ. ಶರೀಫ್ ತಿಳಿಸಿದ್ದಾರೆ. ಮಧ್ಯಾಹ್ನ 1ರಿಂದ ಹೊಳೆಬಸ್ ನಿಲ್ದಾಣದಿಂದ ಎ.ಎ. ವೃತ್ತ, ಗೋಪಿವೃತ್ತ, ಜೈಲ್‌ವೃತ್ತ, ಲಕ್ಷ್ಮೀ ಚಿತ್ರಮಂದಿರ  ವೃತ್ತ, ಸವಳಂಗ ರಸ್ತೆ, ಮಹಾವೀರ ವೃತ್ತ ಮಾರ್ಗವಾಗಿ ಕುವೆಂಪು ರಂಗಮಂದಿರದವರೆಗೆ ರಾಜಬೀದಿ ಉತ್ಸವ  ಹಮ್ಮಿಕೊಳ್ಳಲಾಗಿದೆ. ಸಂಜೆ 4.30ಕ್ಕೆ ಸಭಾ ಕಾರ್ಯಕ್ರಮವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ  ಮಂಜುನಾಥ್ ಉದ್ಘಾಟಿಸುವರು. ಮುಖ್ಯ ಅತಿಥಿಯಾಗಿ ರಾಷ್ಟ್ರೀಯ ಮಾನವ ಹಕ್ಕುಗಳ ಒಕ್ಕೂಟದ ರಾಷ್ಟ್ರಾಧ್ಯಕ್ಷ  ಪ್ರಮೋದ್ ಗೋಣಿ, ಸಾಹಿತಿ ರಹಮತ್ ತರೀಕೆರೆ, ಗೀತಾಂಜಲಿ ಆರ್. ಪಾಟೀಲ್, ಹೆವೆನ್ ಹಬೀಬ್, ಚಾಂದ್ ಪಾಷ ಮತ್ತಿತರರು ಉಪಸ್ಥಿತರಿರುವರು. ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ವಿಪುಲ್ ಬನ್ಸಾಲ್, ನಗರಸಭೆ ಆಯುಕ್ತ ಡಾ. ರವಿ  ಆಗಮಿಸುವರು. ಇದೇ ಸಂದರ್ಭದಲ್ಲಿ ವಿವಿಧ ಗಣ್ಯರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ.   ಇದೇ ವೇಳೆಯಲ್ಲಿ ಅನಾಥಾಶ್ರಮಗಳಿಗೆ ಉಚಿತ ಆಹಾರ ಧಾನ್ಯ ವಿತರಣೆ, ಬಡ ಮಹಿಳೆಯರಿಗೆ ಉಚಿತ ಹೊಲಿಗೆ  ಯಂತ್ರ, ಸೀರೆ ವಿತರಣೆ ಮಾಡಲಾಗುವುದು ಎಂದು ಶರೀಫ್ ವಿವರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.