ತಂತ್ರಜ್ಞಾನ ವಿಜ್ಞಾನದ ಅಂಗವಾಗಿಲ್ಲ: ಆತಂಕ
ಕ.ಪ್ರ. ವಾರ್ತೆ, ಶಿವಮೊಗ್ಗ, ಏ.9
ಪ್ರಸ್ತುತ ವಿಜ್ಞಾನದಲ್ಲಿ ತಂತ್ರಜ್ಞಾನ ಒಂದು ಅಂಗವಾಗಿ ಉಳಿದಿಲ್ಲ. ಬದಲಿಗೆ ತಂತ್ರಜ್ಞಾನದ ಮಹತ್ವವೇ ಹೆಚ್ಚಾಗಿ ವಿಜ್ಞಾನ ತನ್ನ ಮೂಲ ಅಸ್ಥಿತ್ವವನ್ನು ಕಳೆದುಕೊಳ್ಳುತ್ತಿದೆ ಎಂದು ಪ್ರಾಧ್ಯಾಪಕ ಹಾಗೂ ಚಿಂತಕ ಪ್ರೊ. ಬಿ.ಸಿ. ವೀರೇಂದ್ರ ಕುಮಾರ್ ಆತಂಕ ವ್ಯಕ್ತಪಡಿಸಿದರು.
ಸಹ್ಯಾದ್ರಿ ವಿಜ್ಞಾನ ಕಾಲೇಜು ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಹ್ಯಾದ್ರಿ ವಿಜ್ಞಾನ ಪರಿಷತ್ ಸಮಾರೋಪ ಸಮಾರಂಭ ಹಾಗೂ ಕ್ರೀಡಾ ದಿನಾಚರಣೆಯಲ್ಲಿ ಅವರು, ವಿಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆ ಸಂಶೋಧನೆ ನಡೆಸುವ ವೇಳೆ ಹೊಸ ತಂತ್ರಜ್ಞಾನ ಬಳಕೆಯಿಂದ ವಿಜ್ಞಾನದ ಮಹತ್ವ ಕಡಿಮೆಯಾಗುತ್ತಿದೆ ಎಂದರು.
ವಿಜ್ಞಾನ ಮತ್ತು ತಂತ್ರಜ್ಞಾನಗಳೆರಡು ಪೂರಕವಾಗಿದ್ದರೂ ಸಹ ಇಂದು ತಂತ್ರಜ್ಞಾನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ವಿಜ್ಞಾನದ ಸಂಶೋಧನೆಗೆ ತಂತ್ರಜ್ಞಾನ ಹೊಸ ಆಯಾಮ ನೀಡಬಲ್ಲದೆ ಹೊರೆತು ವಿಜ್ಞಾನದ ಮೂಲ ಸ್ಪರೂಪವನ್ನು ನೀಡಲು ಸಾಧ್ಯವಿಲ್ಲ ಎಂದರು.
ತಂತ್ರಜ್ಞಾನವೆಂಬುದು ಭೋಗದ ಜೀವನ ಶೈಲಿಯನ್ನು ಸೃಷ್ಠಿಸುತ್ತಿದ್ದು, ಪ್ರತಿಯೊಬ್ಬರಲ್ಲಿಯೂ ಭೋಗದ ಸಂಸ್ಕೃತಿ ಬೆಳೆಯುತ್ತಿದೆ. ಅಲ್ಲದೇ ಇಂದಿನ ಜೀವನ ಶೈಲಿಯೂ ಭೋಗದ ವ್ಯವಸೆಯಾಗಿ ಮಾರ್ಪಟ್ಟಿದೆ. ಅಮೆರಿಕದಂತಹ ದೇಶಗಳ ಭೋಗದ ಜೀವನವನ್ನು ಇಂದು ಭಾರತೀಯರು ಒಪ್ಪಿಕೊಳ್ಳುತ್ತಿರುವುದು ದುರಂತ ಎಂದರು.
ಹೆಚ್ಚುತ್ತಿರುವ ಅಸಮಾನತೆ: ತಂತ್ರಜ್ಞಾನ ಯುಗ ಬೆಳೆದಂತೆ ಶಿಕ್ಷಣ, ಸಾಮಾಜಿಕ ಕ್ಷೇತ್ರದಲ್ಲಿ ಅಸಮಾನತೆ ಹೆಚ್ಚಾಗುತ್ತದೆ. ವೃತ್ತಿಯಲ್ಲಿಯೂ ಅಂತಹ ಬೇಧ- ಭಾವಗಳು ಬೆಳೆಯುತ್ತಿವೆ ಎಂದ ಅವರು, ನಾವು ಮಾಡುವ ವೃತ್ತಿಯಲ್ಲಿ ತೃಪ್ತಿ ಇರಬೇಕೇ ಹೊರತು, ಹಣ ಮಾಡುವ ದುರುದ್ದೇಶ ಇರಬಾರದು ಎಂದರು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಿಮಿಕ್ರಿ ಕಲಾವಿದ ಪಟ್ಟಾಭಿರಾಮ್ ಸಾಳ್ಯ, ಸಹ್ಯಾದ್ರಿ ವಿಜ್ಞಾನ ಕಾಲೇಜು ಪ್ರಾಂಶುಪಾಲ ಪ್ರೊ. ಜಿ. ಶಕುಂತಲ, ರಾಷ್ಟ್ರೀಯ ಅಂಧರ ಕ್ರಿಕೆಟ್ ತಂಡದ ನಾಯಕ ಶೇಖರ್ ನಾಯ್ಕ್, ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಗೋಪಾಲ್ ನಾಯ್ಕ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

