ಶಿಕ್ಷಣದಿಂದ ಸಾಮಾಜಿಕ ನ್ಯಾಯ
ಕ.ಪ್ರ.ವಾರ್ತೆ, ಶಿವಮೊಗ್ಗ, ಏ.9
ಭಾರತೀಯ ಸಮಾಜದಲ್ಲಿ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ಸಿಗಬೇಕಾದರೆ ಉತ್ತಮ ಶಿಕ್ಷಣ ಒದಗಿಸುವುದರಿಂದ ಮಾತ್ರ ಸಾಧ್ಯ ಎಂದು ಆಂಧ್ರಪ್ರದೇಶದ ತಿರುಪತಿಯ ಶ್ರೀ ವೆಂಕಟೇಶ್ವರ ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ಸಂಶೋಧನಾ ವಿಭಾಗದ ಪ್ರೊ. ಡಿ. ವೆಂಕಟೇಶ್ವರಲು ಹೇಳಿದರು.
ಕುವೆಂಪು ವಿಶ್ವವಿದ್ಯಾನಿಲಯ, ಸಹ್ಯಾದ್ರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಸ್ನಾತಕೋತ್ತರ ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಆಶ್ರಯದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಾಮಾಜಿಕ ನ್ಯಾಯ ಸಬಲೀಕರಣ, ಹಿಂದುಳಿದ ವರ್ಗದ ವಿಷಯ ಮತ್ತು ಸವಾಲುಗಳು ವಿಷಯ ಕುರಿತಂತೆ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಮಾತನಾಡಿ, ಸಮಾಜದಲ್ಲಿನ ಹಿಂದುಳಿದ ವರ್ಗಗಳು ಪ್ರಸ್ತುತ ದಿನಗಳಲ್ಲೂ ಶಿಕ್ಷಣದಿಂದ ವಂಚಿತವಾಗತ್ತಿವೆ. ಈ ಸಮಾಜಕ್ಕೆ ಶಿಕ್ಷಣದ ಬಗ್ಗೆ ಅರಿವು ಮೂಡಿಸುವ ಅಗತ್ಯವಿದ್ದು, ಶೈಕ್ಷಣಿಕವಾಗಿ ಮೇಲೆತ್ತುವ ಕೆಲಸ ಸರ್ಕಾರಗಳಿಂದ ಆಗಬೇಕು ಎಂದರು.
ಸ್ಥಾನಮಾನ ನೀಡಿ; ಸರ್ಕಾರದ ಯೋಜನೆಗಳಿಂದ ಸಾಮಾಜಿಕ ನ್ಯಾಯ ದೊರಕಿದಾಗ ಮಾತ್ರ ದೇಶ ಅಭಿವೃದ್ಧಿಯಾಗಲು ಸಾಧ್ಯ. ಹಿಂದುಳಿದ ವರ್ಗಗಳಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಸರ್ಕಾರದ ಹಲವಾರು ಯೋಜನೆಗಳು ನ್ಯಾಯಯುತವಾಗಿ ದೊರೆಯುವಂತಾಗಬೇಕು. ಹಿಂದುಳಿದ ವರ್ಗಗಳನ್ನು ಗುರುತಿಸಿ, ಅವರಿಗೆ ಸೂಕ್ತ-ಸ್ಥಾನಮಾನ ದೊರೆಯುವ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನಿಸಬೇಕು ಎಂದು ಹೇಳಿದರು.
ರಾಜಕೀಯ, ಸಾಮಾಜಿಕ, ಕ್ಷೇತ್ರಗಳಲ್ಲಿ ಹಿಂದುಳಿದ ವರ್ಗದವರನ್ನು ಕಡೆಗಣಿಸಲಾಗಿದ್ದು, ಸಾಮಾಜಿಕ ವ್ಯವಸ್ಥೆಯಲ್ಲಿಯೂ ಶೋಷಣೆಗೆ ಒಳಗಾಗಿದ್ದಾರೆ. ಕೆಲವೊಂದು ಕ್ಷೇತ್ರಗಳಲ್ಲಿ ಅವರ ಶೋಷಣೆಗೆ ಮಿತಿಯೇ ಇಲ್ಲದಂತಾಗಿದೆ. ಇಂದಿಗೂ ಈ ವರ್ಗಗಳನ್ನು ಜಾತಿ ವ್ಯವಸ್ಥೆಯಲ್ಲಿ ಕಾಣುವುದು ಸರಿಯಲ್ಲ ಎಂದು ತಿಳಿಸಿದರು.
ಹಿಂದುಳಿದ ವರ್ಗದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಅಗತ್ಯ ಸಂಶೋಧನೆಗಳು ಅತ್ಯವಶ್ಯಕವಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಂದಾಗಿ ಯೋಜನೆಗಳನ್ನು ರೂಪಿಸಿ ಅವರ ಶ್ರೇಯೋಭಿವೃದ್ಧಿಗೆ ಕೈಜೋಡಿಸಬೇಕಾಗಿದೆ. ಅದೇ ರೀತಿ ಹಿಂದುಳಿದ ವರ್ಗಗಳಿಗೆ ಸರ್ಕಾರ ವೀಸಲಿಟ್ಟಿರುವ ಆರ್ಥಿಕ ಸಂಪನ್ಮೂಲವನ್ನು ಸಂರ್ಪಕವಾಗಿ ಬಳಕೆಯಾಗುವ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು ಕೆಲಸ ಮಾಡಬೇಕು ಮನವಿ ಮಾಡಿದರು.
ಕುವೆಂಪು ವಿಶ್ವವಿದ್ಯಾನಿಲಯದ ಕುಲಸಚಿವ ಎ. ರಾಮೇಗೌಡ, ಸಹ್ಯಾದ್ರಿ ಕಾಲೇಜು ಪ್ರಾಂಶುಪಾಲ ಪ್ರೊ.ಎಚ್. ಜಯದೇವಪ್ಪ, ಸಮಾಜಶಾಸ್ತ್ರ ಸಂಶೋಧನಾ ವಿಭಾಗದ ಡಾ. ಚಂದ್ರಶೇಖರ್ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

