ಅಂಬೇಡ್ಕರ್ ಜನ್ಮದಿನಾಚರಣೆ (ಸುದ್ದಿ ಸಂಕ್ಷೇಪ)
ಶಿವಮೊಗ್ಗ: ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ರವರ 122ನೇ ಜನ್ಮದಿನಾಚರಣೆಯನ್ನು ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 14ರಂದು ಬೆಳಿಗ್ಗೆ 10 ಗಂಟೆಗೆ ನಗರದ ಅಂಬೇಡ್ಕರ್ ಭವನದಲ್ಲಿ ಪುಷ್ಪ ನಮನ ಸಲ್ಲಿಸುವ ಮೂಲಕ ಜನ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು, ದಲಿತ ಸಂಘಟನೆಯ ಮುಖಂಡರು ಹಾಗೂ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಾಲ್ಗೊಳ್ಳಬೇಕೆಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಧ್ಯಾನದಿಂದ ಆರೋಗ್ಯ ವೃದ್ಧಿ
ಶಿವಮೊಗ್ಗ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಯುವ ರೆಡ್ಕ್ರಾಸ್ ಘಟಕ ಸಂಯುಕ್ತಾಶ್ರಯದಲ್ಲಿ ವಿಶ್ವ ಆರೋಗ್ಯ ದಿನಾಚರಣೆ-2013 ಕಾರ್ಯಕ್ರಮವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಡಿ.ಎಸ್. ಅರುಣ್, ಉದ್ಘಾಟಿಸಿ ಪ್ರತಿಯೊಬ್ಬರು ಯೋಗ, ಧ್ಯಾನದಿಂದ ಆರೋಗ್ಯವನ್ನು ಕಾಪಾಡಿಕೊಳ್ಳುವ ಕ್ರಿಯೆಯಲ್ಲಿ ತೊಡಗಿಕೊಂಡರೆ ಮಾನಸಿಕ ನೆಮ್ಮದಿ ಸಿಗುತ್ತದೆ. ಆರೋಗ್ಯವೇ ಭಾಗ್ಯ ಎನ್ನುವಂತೆ ಮನುಷ್ಯ ನಿರಂತರ ಚಲನೆಯಿಂದ ಆರೋಗ್ಯವನ್ನು ಚೆನ್ನಾಗಿ ನೋಡಿಕೊಳ್ಳಬೇಕೆಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಿ.ಎನ್. ಶಿವಣ್ಣರೆಡ್ಡಿ, ರಕ್ತದೊತ್ತಡ ಪರೀಕ್ಷೆ ಮಾಡಿಸಿಕೊಳ್ಳುವುದರ ಮೂಲಕ ಆರೋಗ್ಯವನ್ನು ಚೆನ್ನಾಗಿ ನೋಡಿಕೊಳ್ಳಲು ಸಾಧ್ಯ ಎಂದರು. ಸಂಧ್ಯಾಕಾವೇರಿ, ಕುರಿತು ಉಪನ್ಯಾಸ ನೀಡಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲ ಪ್ರೊ. ಫ್ರಾನ್ಸಿ ಡಿಕಾಸ್ಟ ಅಧ್ಯಕ್ಷತೆ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

