ಶಿವಮೊಗ್ಗ

'ವ್ಯಾಯಾಮ ಮಾಡಿ ರೋಗ ಮುಕ್ತರಾಗಿ'

Published On :

ಶಿವಮೊಗ್ಗ: ಯಾಂತ್ರಿಕೃತ ಜೀವನ ಶೈಲಿಯಿಂದಲೂ ಹಲವು ಕಾಯಿಲೆಗಳು ಬರುತ್ತಿವೆ. ದಿನನಿತ್ಯ ನಿಯಮಿತ ವ್ಯಾಯಾಮ, ನೆಮ್ಮದಿಯುತ ಜೀವನ, ಪೌಷ್ಠಿಕಾಂಶಯುಕ್ತ ಆಹಾರ ಸೇವನೆ, ನಗುವಿನ ಜೀವನದಿಂದ ಕಾಯಿಲೆಗಳಿಂದ ಮುಕ್ತರಾಗಹುಬಹುದಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಿವಣ್ಣ ರೆಡ್ಡಿ ತಿಳಿಸಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಯುವ ರೆಡ್ ಕ್ರಾಸ್ ಘಟಕ ಹಮ್ಮಿಕೊಂಡಿದ್ದ ಆರೋಗ್ಯ ಜಾಗೃತಿ ಸಮಾರಂಭ ಉದ್ಘಾಟಿಸಿದ ನಂತರ ಮಾತನಾಡಿದ ಅವರು, ಕ್ಷಿಪ್ರಗತಿಯಲ್ಲಿ ಬದಲಾಗುತ್ತಿರುವ ಸಾಮಾಜಿಕ ವ್ಯವಸ್ಥೆ, ಆಹಾರ ಪದ್ಧತಿ ಹಾಗೂ ಒತ್ತಡದ ಜೀವನ ಶೈಲಿಯಿಂದ ನಾನಾ ರೋಗಗಳಿಗೆ ತುತ್ತಾಗುವಂತಾಗಿದೆ ಎಂದು ಅಭಿಪ್ರಾಯಪಟ್ಟರು.
ಜೀವನದಲ್ಲಿ ಮಾನಸಿಕ ಶಾಂತಿ, ನೆಮ್ಮದಿ, ನಗು ಎಂಬುವುದು ಕಡಿಮೆಯಾಗುತ್ತಿದೆ. ಇದರಿಂದ ಅಧಿಕ ರಕ್ತದೊತ್ತಡ, ಸಕ್ಕರೆ ಸೇರಿದಂತೆ ಹಲವು ರೋಗಗಳಿಗೆ ತುತ್ತಾಗುವಂತಾಗಿದೆ ಎಂದರು. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಆರೋಗ್ಯ ಸಂಪಾದನೆಯತ್ತ ಹೆಚ್ಚಿನ ಗಮನಹರಿಸಬೇಕು ಎಂದರು.
ಸಮಾರಂಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಡಿ.ಎಸ್. ಅರುಣ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.