ಶಿವಮೊಗ್ಗ

ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಕೆಜೆಪಿ ಮಹಿಳಾ ಘಟಕ ಒತ್ತಾಯ

Published On :

ಕ.ಪ್ರ ವಾರ್ತೆ, ಶಿವಮೊಗ್ಗ, ಏ.10
ವಿಪ್ರ ವೇದಿಕೆ ಕಾರ್ಯಕ್ರಮದಲ್ಲಿ ಕೆ.ಎಸ್. ಈಶ್ವರಪ್ಪನವರು ನೀಡಿರುವ ಹೇಳಿಕೆ ಖಂಡನಾರ್ಹ ಎಂದು ಕೆಜೆಪಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗಾಯತ್ರಿ ದೇವಿ ಹೇಳಿದ್ದಾರೆ.
ಶಿವಮೊಗ್ಗ ನಗರದಲ್ಲಿ 68 ಬ್ರಾಹ್ಮಣ ಎಳೆ ವಯಸ್ಸಿನ ಹೆಣ್ಣು ಮಕ್ಕಳನ್ನು ಮುಸ್ಲಿಂ ಯುವಕರು ಅಪಹರಣ ಮಾಡಿ ಲೌವ್ ಜಿಹಾದ್ ಹೆಸರಿನಲ್ಲಿ  6 ತಿಂಗಳು, 1 ವರ್ಷದ ನಂತರ ವಾಪಾಸು ತಂದು ಮನೆಗೆ ಬಿಸಾಕಿ ಹೋಗುತ್ತಾರೆ. ಆ ಬಗ್ಗೆ ನನ್ನ ಬಳಿ ದಾಖಲೆ ಇದೆ ಎಂದು ಹೇಳಿದ್ದೀರಿ. ನೀವು ಒಬ್ಬ ಜನಪ್ರತಿನಿಧಿಯಾಗಿ, ಸರ್ಕಾರದ ಉಸ್ತುವಾರಿ ಮಂತ್ರಿಗಳಾಗಿ ಸರ್ಕಾರದ ಎಲ್ಲಾ ಸೌಲಭ್ಯಗಳ ಹಾಗೂ ಸಂವಿಧಾನಾತ್ಮಕ ಅಧಿಕಾರ ಪಡೆದ ನೀವೇನು ಕ್ರಮ ಕೈಗೊಂಡಿರಿ ಎಂದು ಗಾಯತ್ರಿದೇವಿ ಈಶ್ವರಪ್ಪನವರನ್ನು ಪ್ರಶ್ನಿಸಿದ್ದಾರೆ.
ಸಂವಿಧಾನದ ಬದ್ಧತೆಯನ್ನು ಪ್ರಶ್ನೆ ಮಾಡುವ ರೀತಿ ಹೇಳಿಕೆಗಳನ್ನು ಕೊಟ್ಟ ಈಶ್ವರಪ್ಪನವರು ಕೋಮು ಸೌಹಾರ್ಧತೆ ಕದಡುವ ಪ್ರಯತ್ನ ಮಾಡಿದ್ದಾರೆ. ಒಂದು ಕಡೆ ಬ್ರಾಹ್ಮಣರಂತಹ ಪ್ರಬುದ್ಧ ಜನಾಂಗವನ್ನು ತುಷ್ಟೀಕರಣ ಮಾಡಿ ಮಾತನಾಡಿದ್ದಾರೆ ಎಂದು ಅವರು ಟೀಕಿಸಿದ್ದಾರೆ.
ಚುನಾವಣಾ ಆಯೋಗ ಈಶ್ವರಪ್ಪನವರ ಇಂತಹ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಕೂಡಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು.
ಚುನಾವಣಾ ಸಂದರ್ಭದಲ್ಲಿ ಈ ರೀತಿ ಹೇಳಿಕೆ ನೀಡಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದರ ಬಗ್ಗೆ ಕ್ರಮ ಕೈಗೊಳ್ಳಬೇಕು. ಇಡಿ ರಾಜ್ಯದಲ್ಲಿ ಒಂದು ಜನಾಂಗದ ಯುವತಿಯರು ಕಣ್ಮರೆಯಾಗಿರುವುದು ಒಂದು ದೊಡ್ಡ ಪ್ರಕರಣ ಜಿಲ್ಲೆಯ ರಕ್ಷಣಾಧಿಕಾರಿಗಳು ಹಾಗೂ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಈಶ್ವರಪ್ಪನವರ ಬಳಿ ಇರುವ ದಾಖಲೆಗಳನ್ನು ವಶ ಪಡಿಸಿಕೊಂಡು ಜನತೆಯ ಮುಂದೆ ಸತ್ಯಾಸತ್ಯತೆಯನ್ನು ಹೊರತರಬೇಕು ಎಂದು ಒತ್ತಾಯಿಸುವುದಾಗಿ ಗಾಯಿತ್ರಿದೇವಿ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.