ಶಿವಮೊಗ್ಗ

ಜಿಲ್ಲೆಯ 7 ಕ್ಷೇತ್ರಗಳಲ್ಲಿ ಬಿಎಸ್‌ಪಿ ಕಣಕ್ಕೆ

Published On :

ಕ.ಪ್ರ ವಾರ್ತೆ, ಶಿವಮೊಗ್ಗ, ಏ.10
ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ 7 ಕ್ಷೇತ್ರಗಳಿಗೆ ಬಿಎಸ್‌ಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ವೀರೇಶ್ ಕ್ಯಾತಿನಕೊಪ್ಪ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಎಸ್‌ಪಿ ರಾಜ್ಯಾದ್ಯಂತ 93 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಕ್ಕೆ ವೀರೇಶ್ ಕ್ಯಾತಿನಕೊಪ್ಪ, ಸೊರಬ ಕ್ಷೇತ್ರಕ್ಕೆ ಎಲ್.ಜಿ.  ಗುಡ್ಡಪ್ಪ, ತೀರ್ಥಹಳ್ಳಿಯಿಂದ ಮಂಜುನಾಥ್ ಗೌಡ ಸ್ಪರ್ಧಿಸಲಿದ್ದಾರೆ. ಉಳಿದ ಕ್ಷೇತ್ರಗಳ ಅಭ್ಯರ್ಥಿಗಳನ್ನು ಎರಡನೇ ಪಟ್ಟಿಯಲ್ಲಿ ಘೋಷಿಸಲಾಗುವುದು ಎಂದು ತಿಳಿಸಿದರು. 
ರಾಜ್ಯಮಟ್ಟದಲ್ಲಿ ಎಸ್‌ಡಿಪಿಐಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಮೊದಲ ಪಟ್ಟಿಯಲ್ಲಿ 35 ಸ್ಥಾನಗಳನ್ನು ಆ ಪಕ್ಷಕ್ಕೆ ಬಿಟ್ಟುಕೊಡಲಾಗಿದೆ. ಅದರಂತೆ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಎಸ್‌ಡಿಪಿಐ ಪಕ್ಷದ ಕೆ.ಬಿ. ಬಶೀರ್ ಅಹಮದ್ ಸ್ಪರ್ಧಿಸಲಿದ್ದಾರೆ. ಬಿಜೆಪಿ, ಕೆಜೆಪಿ ಭ್ರಷ್ಟಾಚಾರದ ಎರಡು ಮುಖಗಳಿದ್ದಂತೆ. ಇನ್ನು ಕಾಂಗ್ರೆಸ್ ಬೆಲೆ ಏರಿಕೆಯಿಂದ ಜನಸಾಮಾನ್ಯರ ವಿಶ್ವಾಸ ಕಳೆದುಕೊಂಡಿದೆ ಎಂದು ಆರೋಪಿಸಿದರು. ಪ್ರಚಾರಕ್ಕೆ ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ, ಎನ್. ಮಹೇಶಪ್ಪ ಸೇರಿದಂತೆ ರಾಷ್ಟ್ರಮಟ್ಟದ ನಾಯಕರು ಆಗಮಿಸಲಿದ್ದಾರೆ ಎಂದರು. ಶೇಖರಪ್ಪ, ವೆಂಕಟೇಶ್, ಮಂಜುನಾಥ್, ಅಬ್ದುಲಲ್ಮುನಾಫ್, ಬಾಲಸುಬ್ರಹ್ಮಣ್ಯಂ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.