ಶಿವಮೊಗ್ಗ

ಸಿಗುವ ಅವಕಾಶದಲ್ಲೇ ಸಾಧನೆ ಮಾಡಿ: ವಿದ್ಯಾ

Published On :

ಕ.ಪ್ರ. ವಾರ್ತೆ , ಸಾಗರ , ಏ.10
ವಿದ್ಯಾರ್ಥಿನಿಯರು ಸವಾಲುಗಳ ನಡುವೆಯೆ ದೊರೆತ ಅವಕಾಶ ಉಪಯೋಗಿಸಿಕೊಂಡು ಉತ್ತಮ ಸಾಧನೆ ಮಾಡುವ ಸಂಕಲ್ಪ ಮಾಡಬೇಕು ಎಂದು ರಂಗಭೂಮಿ ಕಲಾವಿದೆ ವಿದ್ಯಾ ಅಕ್ಷರ ಹೇಳಿದರು.
ಇಲ್ಲಿನ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ಸಾಂಸ್ಕೃತಿಕ, ಕ್ರೀಡೆ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳ ಸಮಾರೋಪದಲ್ಲಿ ಅವರು ಮಾತನಾಡಿದರು.
ಕೆಲವು ಸಂದರ್ಭದಲ್ಲಿ ಉನ್ನತ ವ್ಯಾಸಂಗ ಮಾಡುವುದೇ ಶಾಪ ಎನ್ನುವ ಸ್ಥಿತಿ ಕೆಲವು ಕುಟುಂಬಗಳಲ್ಲಿ ಕಂಡು ಬರುತ್ತಿದೆ. ಉನ್ನತ ವಿದ್ಯಾಭ್ಯಾಸ ಪಡೆದು ಊರುಮನೆ ಬಿಟ್ಟು ಉದ್ಯೋಗವರಸಿ ನಗರಗಳತ್ತ ವಲಸೆ ಹೋಗುತ್ತಿರುವ ಯುವಜನರು ಕುಟುಂಬದೊಂದಿಗಿನ ಸಂಬಂಧ ಕಳೆದುಕೊಳ್ಳುತ್ತಿರುವುದು ದುರದೃಷ್ಟರಕರ ಸಂಗತಿ. ವಿದ್ಯಾವಂತರು ಹಳ್ಳಿಯಲ್ಲಿದ್ದು ಗ್ರಾಮೀಣ ಬದುಕಿನ ಮೌಲ್ಯ ಹೆಚ್ಚಿಸಬೇಕು. ನಗರಗಳಲ್ಲಿ ಸಿಗುವ ಉದ್ಯೋಗ ಕೈತುಂಬ ಸಂಬಳ ನೀಡಬಹುದೆ ವಿನಾ ನಿಮ್ಮ ವ್ಯಕ್ತಿತ್ವ ರೂಪಿಸುವುದಿಲ್ಲ ಎಂದು ಹೇಳಿದರು.
ದೇಶದ ಬಗ್ಗೆ ಗೌರವವಿರಲಿ: ಸನ್ಮಾನ ಸ್ವೀಕರಿಸಿ ಮಾತನಾಡಿದ ಶ್ರೀ ಲಕ್ಷೀಸೇವಾ ಟ್ರಸ್ಟ್ನ ಅಧ್ಯಕ್ಷ ಎಸ್.ಕೆ. ಮಂಜುನಾಥ ಶೇಟ್, ಇತ್ತೀಚಿನ ವರ್ಷಗಳಲ್ಲಿ ಉನ್ನತ ಶಿಕ್ಷಣ ಪಡೆದ ವಿದ್ಯಾರ್ಥಿಗಳು ವಿದೇಶಗಳಲ್ಲಿ ಉದ್ಯೋಗ ಕೈಗೊಳ್ಳುವ ಕನಸು ಕಾಣುತ್ತಿದ್ದಾರೆ. ಇದರಿಂದಾಗಿ ನಮ್ಮ ದೇಶದ ಜ್ಞಾನಸಂಪತ್ತು ವಿದೇಶಿಗರ ಪಾಲಾಗುತ್ತಿದೆ. ಯುವಜನರು ಸ್ವದೇಶದ ಬಗ್ಗೆ ಗೌರವ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಅವರು ಹೇಳಿದರು.
ಪ್ರಾಚಾರ್ಯ ಡಾ. ಅಶೋಕ ಡಿ. ರೇವಣಕರ್ ಅಧ್ಯಕ್ಷತೆ ವಹಿಸಿದ್ದರು. ಕುವೆಂಪು ವಿವಿ ಕ್ರೀಡಾ ವಿಭಾಗದ ಉಪನಿರ್ದೇಶಕ ನಾಗರಾಜ ಜಿ.ಎಸ್., ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಬಿ.ಎಚ್. ರಾಘವೇಂದ್ರ, ಸಾಂಸ್ಕೃತಿಕ ವೇದಿಕೆ ಸಂಚಾಲಕ ಪ್ರೊ. ಕೆ.ಎನ್. ಮಹಾಬಲೇಶ್ವರ್, ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಪ್ರೊ. ಸಿ.ಎನ್. ಹರ್ಷವರ್ಧನ್, ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ. ವಿ. ವೆಂಕಟೇಶ್, ವಿದ್ಯಾರ್ಥಿ ಪ್ರತಿನಿಧಿಗಳಾದ ಅನುಷಾ ಹೆಗಡೆ, ರಾಜೇಶ್ವರಿ ಯು.ಬಿ., ಚಾಂದಿನಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.