ಹಾಸ್ಟೆಲ್ನಲ್ಲಿ ಅವ್ಯವಹಾರ: ತನಿಖೆಗೆ ಆಗ್ರಹ
ಕ.ಪ್ರ.ವಾರ್ತೆ,ಶಿವಮೊಗ್ಗ, ಏ.10
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸರ್ಕಾರಿ ಹಾಸ್ಟೆಲ್ಗಳ ಸಾಮಾಗ್ರಿ ಖರೀದಿಯಲ್ಲಿ ವ್ಯಾಪಕ ಅವ್ಯವಹಾರ ನಡೆದಿದೆ. ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ ವರ್ತೂರು ಪ್ರಕಾಶ್ ಯುವಸೇನೆ ಜಿಲ್ಲಾ ಘಟಕ ಜಿಪಂ ಮುಂಭಾಗ ಪ್ರತಿಭಟನೆ ನಡೆಸಿತು.
ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ಇಲಾಖೆ ವ್ಯಾಪ್ತಿ ವಿದ್ಯಾರ್ಥಿ ನಿಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಮೂಲ ಸೌಲಭ್ಯ ಕಲ್ಪಿಸುವ ನೆಪದಲ್ಲಿ ವ್ಯಾಪಕ ಅಕ್ರಮ ಎಸಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಯಾವುದೇ ಸಾಮಾಗ್ರಿಗಳು ಸರಬರಾಜಾಗದಿದ್ದರೂ ಬಿಲ್ಗಳನ್ನು ಮಂಜೂರು ಮಾಡಲಾಗುತ್ತಿದೆ. ಸೀಮಿತ ಟೆಂಡರ್ದಾರರಿಗೆ ಮಾತ್ರ ಸಾಮಾಗ್ರಿ ಸರಬರಾಜು ಟೆಂಡರ್ ಲಭ್ಯವಾಗುತ್ತಿದೆ. ಈ ಟೆಂಡರ್ದಾರರು ಒಳ ಒಪ್ಪಂದ ಮಾಡಿಕೊಂಡು, ಅಧಿಕಾರಿಗಳೊಂದಿಗೆ ಹೊಂದಾಣಿಕೆ ನಡೆಸಿ ಸಾಮಾಗ್ರಿ ಸರಬರಾಜು ಮಾಡದೆ ಹಣ ಪಡೆದು ಸರ್ಕಾರಕ್ಕೆ ವಂಚಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ.
ಹಾಸ್ಟೆಲ್ಗಳಿಗೆ ವಿವಿಧ ಸಾಮಾಗ್ರಿ ಖರೀದಿಗೆ ರು. 66 ಲಕ್ಷ ರುಪಾಯಿ ಟೆಂಡರ್ ಕರೆದು ಆದೇಶ ನೀಡಲಾಗಿದೆ. ಆದರೆ ಇಲ್ಲಿಯವರೆಗೂ ಯಾವುದೇ ವಿದ್ಯಾರ್ಥಿ ನಿಲಯಗಳಿಗೆ ಸಾಮಾಗ್ರಿಗಳು ಮಾತ್ರ ಸರಬರಾಜಾಗಿಲ್ಲ. ಹಣ ಮಾತ್ರ ಬಿಡುಗಡೆ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಈ ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆಯ ಪ್ರಮುಖರು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು. ಎನ್. ರಾಯ್, ಶ್ರೀನಿವಾಸ್, ಆಲ್ಕೊಳ ಡ್ಯಾನಿ, ಅಶೋಕ್ ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

