ಶಿವಮೊಗ್ಗ

ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು: ವಿಶ್ವಾಸ

Published On :

ಕ.ಪ್ರ. ವಾರ್ತೆ, ಸಾಗರ, ಏ.10
ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ತಾಲೂಕಿನ ಚಿಪ್ಪಳಿಯಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡವರನ್ನು ಬರಮಾಡಿಕೊಂಡು, ರಾಜ್ಯದಲ್ಲಿ ಕಾಂಗ್ರೆಸ್ ಗಾಳಿ ಬೀಸುತ್ತಿದ್ದು, ಈ ಬಾರಿ ಪಕ್ಷವು ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು.
ಹಿಂದೆ ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿದ್ದಾಗ ಜಾರಿಗೆ ತಂದ ಜನಕಲ್ಯಾಣ ಕಾರ್ಯಕ್ರಮಗಳನ್ನು ಜನರು ಈತನಕ ಮರೆತಿಲ್ಲ. ಆಕಸ್ಮಿಕ ಎಂಬಂತೆ ಒಂದು ಬಾರಿ ಜನರು ಬಿಜೆಪಿಗೆ ಅಧಿಕಾರ ನೀಡಿದರು. ಆದರೆ, ಅಧಿಕಾರ ಹಿಡಿದ ಪಕ್ಷ ಜನರ ಆಶಯಗಳಿಗೆ ಸ್ಪಂದಿಸಿಲ್ಲ. ಜನರಿಗೆ ಅಗತ್ಯವಾಗಿ ಬೇಕಾಗಿದ್ದ ಯಾವುದೆ ಕಾರ್ಯಕ್ರಮವನ್ನು ಜಾರಿಗೆ ತಂದಿಲ್ಲ. ಆಶ್ರಯ, ಬಗರ್ ಹುಕುಂ, ಅರಣ್ಯಭೂಮಿ ಸಾಗುವಳಿ ಪತ್ರ, ಪಡಿತರ ಚೀಟಿ ವಿತರಣೆಯಂತಹ ಜನರ ಮೂಲಭೂತ ಸಮಸ್ಯೆಗಳ ಬಗ್ಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನಿಗಾವಹಿಸದೆ ಇರುವುದು ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ವರದಾನವಾಗಲಿದೆ ಎಂದರು.
ಜಿಲ್ಲೆಯ ಎಲ್ಲಾ ಭಾಗದಲ್ಲಿ ಪ್ರವಾಸ ಮಾಡಿದಾಗ ಜನರು ಆಡಳಿತಾರೂಢ ಸರ್ಕಾರದ ಲೋಪಗಳ ಬಗ್ಗೆ ಅಳಲನ್ನು ತೋಡಿಕೊಂಡು, ಆಯ್ಕೆ ಮಾಡಿ ಕಳಿಸಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜನಪರ ಯೋಜನೆ ಹಾಗೂ ಎಲ್ಲಾ ವರ್ಗದ ಹಿತಕಾಯುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಇದೆ ಎಂದು ಹೇಳಿದರು.
ಐಗಿನಬೈಲ್ ಗೋಪಾಲ ಪೂಜಾರಿ, ದಾನಪ್ಪ, ಮಂಜುನಾಥ್, ರಮೇಶ್, ಕೆರೆಯಪ್ಪ ಇನ್ನಿತರರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಹೊಳೆಯಪ್ಪ, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಭೀಮನೇರಿ ಶಿವಪ್ಪ, ಪ್ರಮುಖರಾದ ರವಿ ಜಂಬೂರುಮನೆ, ಲಕ್ಷ್ಮಣ, ಚಿಪ್ಪಳಿಯ ಗುರುನಾಥ ಗೌಡ, ಶೇಖರಪ್ಪ ಗೌಡ, ವೀರೇಂದ್ರ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.