ಶಿವಮೊಗ್ಗ

ನಗರಸಭೆ ಆಯುಕ್ತ ರವಿ ವರ್ಗಾವಣೆ

Published On :

ಕ.ಪ್ರ.ವಾರ್ತೆ ,ಶಿವಮೊಗ್ಗ , ಏ.10
ಶಿವಮೊಗ್ಗ ನಗರಸಭೆ ಆಯುಕ್ತ ಎಂ.ಆರ್. ರವಿ ಅವರನ್ನು ಸರ್ಕಾರ ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾಗಿ ವರ್ಗಾಯಿಸಿದೆ.
ಮೈಸೂರು ಪಾಲಿಕೆಯ ಆಯುಕ್ತರಾಗಿ ಆಗಿ ಕಾರ್ಯನಿರ್ವಹಣೆ ಮಾಡುತ್ತಿದ್ದ ರವಿಯವರನ್ನು ಎರಡು ತಿಂಗಳ ಹಿಂದೆಯಷ್ಟೇ ಶಿವಮೊಗ್ಗ ನಗರಸಭೆ ಆಯುಕ್ತರನ್ನಾಗಿ ನೇಮಿಸಲಾಗಿತ್ತು. ರವಿಯವರು ಮೂಲತ- ಶಿವಮೊಗ್ಗ ಜಿಲ್ಲೆಯವರಲ್ಲ, ಅವರು ಶಿವಮೊಗ್ಗಕ್ಕೆ ಬಂದು ಇನ್ನೂ ಎರಡು ತಿಂಗಳು ಕೂಡ ಆಗಿಲ್ಲ. ಅವರ ಮೇಲೆ ಯಾವುದೇ ಆರೋಪಗಳು ಕೇಳಿಬಂದಿಲ್ಲ. ಆದರೂ ಅವರನ್ನು ದಿಢೀರ್ ವರ್ಗಾವಣೆ ಮಾಡಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ರವಿಯವರು ಪ್ರಸ್ತುತ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದು, ಕಳೆದ ವಾರ ನಡೆದ ರಾಜಕೀಯ ಸಭೆ ಮೇಲೆ ದಾಳಿ ಮಾಡಿದ್ದು.
ಯಾವುದೇ ಒತ್ತಡಕ್ಕೆ ಮಣಿಯದೇ ಪ್ರಕರಣ ದಾಖಲಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಕಾಣದ ಕೈಗಳು ಅವರನ್ನು ವರ್ಗಾವಣೆ ಮಾಡಿಸಿವೆ ಎನ್ನಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.