ಶಿವಮೊಗ್ಗ

ಇಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ

Published On :

ಶಿವಮೊಗ್ಗ: ನಗರ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿ ಏಪ್ರಿಲ್ 13 ರಂದು ಬೆಳಗ್ಗೆ 11 ಗಂಟೆಗೆ ನಗರದ ಬಿ.ಎಚ್. ರಸ್ತೆಯಲ್ಲಿರುವ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಕಾರ್ಯಕರ್ತರ ಸಭೆ ಕರೆದಿದೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಕುಮಾರ್ ಬಂಗಾರಪ್ಪ, ಕೆಪಿಸಿಸಿ ಉಪಾಧ್ಯಕ್ಷ ಕರಿಯಣ್ಣ, ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಕೆ.ಬಿ. ಪ್ರಸನ್ನ ಕುಮಾರ್, ಎಐಸಿಸಿ ಸದಸ್ಯ ಮಂಜುನಾಥ್ ಭಂಡಾರಿ, ಬಲ್ಕಿಷ್ ಬಾನು, ಮಾಜಿ ಶಾಸಕ ಎಚ್.ಎಂ. ಚಂದ್ರಶೇಖರಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಮೀರ್ ಅಜೀಜ್ ಅಹಮದ್, ಇಸ್ಮಾಯಿಲ್ ಖಾನ್, ಎಸ್.ಪಿ. ದಿನೇಶ್, ನಗರಸಭೆ ಮಾಜಿ ಅಧ್ಯಕ್ಷ ಎಂ.ಕೆ. ಸುರೇಶ್ ಕುಮಾರ್, ರಮೇಶ್ ಹೆಗ್ಡೆ, ಎನ್. ರಮೇಶ್, ವೆಂಕಟೇಶ್ ಗೌಡ, ರಿಚರ್ಡ್ ಕ್ವಾಡರ್ಸ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಕಾಂಗ್ರೆಸ್‌ನ ಪದಾಧಿಕಾರಿಗಳು, ಮುಂಚೂಣಿ ಘಟಕಗಳ ಜಿಲ್ಲಾ ಮತ್ತು ಬ್ಲಾಕ್ ಅಧ್ಯಕ್ಷರು, ಸದಸ್ಯರು, ಎಲ್ಲಾ ಬೂತ್ ಮಟ್ಟದ ಪದಾಧಿಕಾರಿಗಳು ಪಾಲ್ಗೊಳ್ಳುವಂತೆ ಸಮಿತಿಯ ಅಧ್ಯಕ್ಷ ಪಿ. ರುದ್ರೇಶ್ ತಿಳಿಸಿದ್ದಾರೆ.
ಆಟೋಟ ಸ್ಪರ್ಧೆ
ಶಿವಮೊಗ್ಗ: ಜಿಲ್ಲಾ ಬಂಜಾರ್ ಮಹಿಳಾ ಸಂಘದಲ್ಲಿ ಏ.13ರಂದು ಬೆಳಗ್ಗೆ 11 ಗಂಟೆಗೆ ಸಮುದಾಯದ ಮಹಿಳೆಯರಿಗಾಗಿ ವಿವಿಧ ಆಟೋಟ ಸ್ಪರ್ಧೆ ಏರ್ಪಡಿಸಲಾಗಿದೆ. ಸಮುದಾಯದ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಘ ತಿಳಿಸಿದೆ. ಪಾಸಿಂಗ್ ಬಾಲ್, ರಂಗೋಲಿ ಸ್ಪರ್ಧೆ, ಬಕೆಟ್‌ನಿಂದ ಬಾಲ್ ಮತ್ತಿತರರ ಕ್ರೀಡೆಗಳು ನಡೆಯಲಿವೆ ಎಂದು ಸಂಘದ ಕಾರ್ಯದರ್ಶಿ ಬಿ. ಸುಧಾಮಣಿ ತಿಳಿಸಿದ್ದಾರೆ. ವಿವರಗಳಿಗಾಗಿ ಮೊ. 9980194414.
ಉಚಿತ ಆರೋಗ್ಯ ತಪಾಸಣಾ ಶಿಬಿರ
ಶಿವಮೊಗ್ಗ: ಜಿಸಿಎಸ್ ಹೆಲ್ತ್ ಕೇರ್ ಲ್ಯಾಬೋರೇಟರಿಯಲ್ಲಿ ಏ.12ರಿಂದ 19ರವರೆಗೆ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಿದೆ. ರಕ್ತದೊತ್ತಡ, ಸಕ್ಕರೆ ಪ್ರಮಾಣ, ಹಿಮೋಗ್ಲೋಬಿನ್ ಮೊದಲಾದ  ಪರೀಕ್ಷೆಗಳು ಹಾಗೂ ತಜ್ಞ ವೈದ್ಯರು ಸಂದರ್ಶನದ ಮೂಲಕ ಮಾಹಿತಿ ನೀಡುವರು ಎಂದು ಡಾ. ಎ. ಸತೀಶ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ. ವಿವರಗಳಿಗಾಗಿ ದೂ. 08182-224600.
ಅಧ್ಯಕ್ಷರ ಆಯ್ಕೆ
ಭದ್ರಾವತಿ: ಪಟ್ಟಣದ ಸರ್ ಎಂ.ವಿ. ಫ್ರೆಂಡ್ಸ್ ಅಸೋಸಿಯೋಶನ್‌ನ ನೂತನ ಅಧ್ಯಕ್ಷರಾಗಿ ಎಂ. ಚಂದ್ರಶೇಖರಯ್ಯ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಮಲ್ಲೇಶಪ್ಪ, ಉಪಾಧ್ಯಕ್ಷರಾಗಿ ಶಿವಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಹಾಲಪ್ಪ ಆಯ್ಕೆಯಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.