ಕೆಜೆಪಿ ಅಭ್ಯರ್ಥಿ ಹಾಲಪ್ಪ ನಾಮಪತ್ರ
ಕ.ಪ್ರ.ವಾರ್ತೆ, ಸೊರಬ, ಏ.12
ಸೊರಬ ವಿಧಾನಸಭಾ ಕ್ಷೇತ್ರದ ಕೆಜೆಪಿ ಅಭ್ಯರ್ಥಿ ಎಚ್. ಹಾಲಪ್ಪ ಶುಕ್ರವಾರ ಸ್ಥಳೀಯ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ಬೆಳಗ್ಗೆ ಇಲ್ಲಿನ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಸಾವಿರಾರು ಅಭಿಮಾನಿಗಳು, ಕೆಜೆಪಿ ಕಾರ್ಯಕರ್ತರು, ಮುಖಂಡರೊಂದಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ, ನಾಮಪತ್ರ ಸಲ್ಲಿಸಿದರು.
ಈ ವೇಳೆ ಪತ್ನಿ ಯಶೋಧಾ, ಕೆಜೆಪಿ ಮುಖಂಡ ಪುರುಷೋತ್ತಮ್, ತಾಲೂಕು ಕೆಜೆಪಿ ಅಧ್ಯಕ್ಷ ಎಂ.ಆರ್. ಪಾಟೀಲ್, ಕೆಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಕಾರ್ಯದರ್ಶಿ ಬಸವರಾಜ ಓಟೂರು, ಸಾಗರ ಕ್ಷೇತ್ರದ ಕೆಜೆಪಿ ಅಭ್ಯರ್ಥಿ ಬಿ.ಆರ್. ಜಯಂತ್, ಟಿ.ಡಿ. ಮೇಘರಾಜ್, ಜಿ.ಪಂ. ಸದಸ್ಯ ಗುರುಕುಮಾರ್ ಪಾಟೀಲ್, ಕೋಮಲಾ ನಿರಂಜನ, ಪ.ಪಂ. ಸದಸ್ಯ ಮಹೇಶ್ಗೌಳಿ, ತಾಲೂಕು ಬಿಜೆಪಿ ಅಧ್ಯಕ್ಷ ಎಂ.ಆರ್. ಪಾಟೀಲ್, ನಿರಂಜನ ದೊಡ್ಮನೆ ಮತ್ತಿತರರು ಇದ್ದರು.
ಮೊದಲ ಅಭ್ಯರ್ಥಿ: ಜಿಲ್ಲೆಯಲ್ಲಿ ಕೆಜೆಪಿಯಿಂದ ಪ್ರಥಮವಾಗಿ ನಾಮಪತ್ರ ಸಲ್ಲಿಸಿದ ಮೊದಲ ಅಭ್ಯರ್ಥಿ ಎಚ್. ಹಾಲಪ್ಪ, ತಮ್ಮ ಬ್ಯಾಂಕ್ ಖಾತೆಯಲ್ಲಿ ರು. 2,04,023 ಪತ್ನಿ ಯಶೋಧ ಅವರ ಬ್ಯಾಂಕ್ ಖಾತೆಯಲ್ಲಿ ರು. 10,12,716 ರುಪಾಯಿ ಆಸ್ತಿ ವಿವರಣೆ ನೀಡಿದ್ದಾರೆ.
ಚುನಾವಣಾಧಿಕಾರಿಯಾಗಿ ಸಿ.ಎನ್. ಶ್ರೀಧರ್ ಕಾರ್ಯನಿರ್ವಹಿಸಿದರು. ತಹಸೀಲ್ದಾರ್ ಎನ್.
ತೇ ಜಸ್ವಿಕುಮಾರ್ ಇದ್ದರು. ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಹಾಲಪ್ಪ, ಜನಪರ ಕಾಳಜಿಯ ಕನಸು ಹೊತ್ತ ಕೆಜೆಪಿಗೆ ಆಶೀರ್ವಾದ ಮಾಡುವುದರ ಮೂಲಕ ಮತ್ತೊಮ್ಮೆ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿ ಮಾಡುವುದೇ ತಮ್ಮ ಗುರಿಯಾಗಿದೆ ಎಂದರು.
ಹಿಂದೆಂದೂ ಕಾಣದ ಅಭಿವೃದ್ಧಿ: ರಾಜ್ಯ ಹಿಂದೆಂದೂ ಕಾಣದಷ್ಟು ಅಭಿವೃದ್ಧಿಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕೇವಲ ಎರಡೂವರೆ ವರ್ಷಗಳ ಅವಧಿಯಲ್ಲಿ ಮಾಡಿ ತೋರಿಸಿದ್ದಾರೆ. ಅಭಿವೃದ್ಧಿಯ ದೃಷ್ಟಿಯಿಂದ ರಾಜ್ಯವನ್ನು ರಾಷ್ಟ್ರದಲ್ಲೇ ಮೊದಲ ಸ್ಥಾನಕ್ಕೇರಿಸುವ ಗುರಿ ಹೊಂದಿರುವ ಯಡಿಯೂರಪ್ಪ, ರಾಜ್ಯದ ಪ್ರತಿಯೊಂದು ಜನಾಂಗವನ್ನು ಸಮಾಜದ ಮುಖ್ಯವಾಹಿನಿಗೆ ಪರಿಚಯಿಸಿ, ಆರ್ಥಿಕಾಭಿವೃದ್ಧಿಗೆ ಸಹಕಾರಿಯಾಗಿದ್ದಾರೆ ಎಂದರು.
ಕಳೆದ 4 ವರ್ಷದ ಹಿಂದೆ ಯಡಿಯೂರಪ್ಪನವರ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರದ ಯೋಜನೆಗಳಲ್ಲಿ ತಾಲೂಕಿಗೆ ಅಭಿವೃದ್ಧಿ ಅನುದಾನಗಳ ಮಹಾಪೂರವೇ ಹರಿದು ಬಂದಿದೆ.
ಅಲ್ಲದೇ ಸರ್ಕಾರಿ ಸೌಲಭ್ಯ ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ ಎಂದರು.
ಅಭಿವೃದ್ಧಿಯನ್ನು ಬಯಸಿರುವ ತಾಲೂಕಿನ ಜನತೆ ಈ ಬಾರಿ ಅಧಿಕ ಮತಗಳ ಅಂತರದಿಂದ ತಮ್ಮನ್ನು ಗೆಲ್ಲಿಸುತ್ತಾರೆ ಎಂದು ಹರತಾಳು ಹಾಲಪ್ಪ ಅವರು ಈ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

