ದೇವಸ್ಥಾನದ ಹೆಸರಿನಲ್ಲಿ ನೀತಿಸಂಹಿತೆ ಉಲ್ಲಂಘನೆ: ದೂರು
ಶಿವಮೊಗ್ಗ: ಆದಿಪರಾಶಕ್ತಿ ದೇವಸ್ಥಾನದ ಹೆಸರಿನಲ್ಲಿ ಕೆ.ಎಸ್. ಈಶ್ವರಪ್ಪನವರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಎಸಗಿದ್ದಾರೆ ಎಂದು ಕನ್ನಡಸೈನ್ಯ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ಸಿ. ಜಯ ಆರೋಪಿಸಿದ್ದಾರೆ. ಅಷ್ಟೇ ಅಲ್ಲದೇ, ಜಿಲ್ಲಾ ಚುನಾವಣಾಧಿಕಾರಿಯವರಿಗೆ ಈ ಸಂಬಂಧ ದೂರುಸಲ್ಲಿಸಿದ್ದಾರೆ.
ಏಪ್ರಿಲ್ 16ರಂದು ಮಂಗಳವಾರ ಶ್ರೀ ಆದಿಪರಾಶಕ್ತಿ ಚಾಮುಂಡೇಶ್ವರಿ ಮತ್ತು ಅಧಿದೇವತೆ ಪ್ರತಿ ದೇವತೆಯ 4ನೇ ವರ್ಷದ ವಾರ್ಷಿಕೋತ್ಸವದೊಡನೆ ಕಲಾ ಹೋಮ, ದುರ್ಗಾಹೋಮ ಮತ್ತು ಕುಂಭಾಭಿಷೇಕ, ಅನ್ನಸಂತರ್ಪಣೆ ಏರ್ಪಡಿಸಿದ್ದಾರೆ. ಈ ಧಾರ್ಮಿಕ ಕಾರ್ಯಕ್ರಮದ ಬಗ್ಗೆ ಯಾವುದೇ ತಕರಾರು ಇಲ್ಲ. ಆದರೆ, ಚುನಾವಣೆ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪದಾಧಿಕಾರಿಗಳು ಸಾವಿರಾರು ಕರಪತ್ರ ಮುದ್ರಿಸಿ ಹಂಚಿದ್ದಾರೆ. ಕರಪತ್ರದಲ್ಲಿ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕೆ.ಎಸ್. ಈಶ್ವರಪ್ಪ, ಉಪಮುಖ್ಯಮಂತ್ರಿ, ಕರ್ನಾಟಕ ಸರ್ಕಾರ ನಮೂದಿಸಲಾಗಿದೆ. ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ರೀತಿ ಪ್ರಚಾರ ಅಪರಾಧವಾಗುತ್ತದೆ. ಇದೇ ಆಹ್ವಾನ ಪತ್ರಿಕೆಯಲ್ಲಿ ಮಾಜಿ ನಗರಸಭಾ ಸದಸ್ಯ ಬಿಜೆಪಿಯ ಆರ್. ಲಕ್ಷ್ಮಣ್ ಹೆಸರೂ ಪ್ರಕಟಗೊಂಡಿದೆ. ಮೇಲ್ನೋಟಕ್ಕೆ ಇದು ಬಿಜೆಪಿಯ ಧಾರ್ಮಿಕ ಕಾರ್ಯಕ್ರಮವೆಂದು ಭಾವಿಸಲಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಜೊತೆಗೆ ಕಾರ್ಯಕ್ರಮ ಆಯೋಜಕರು, ಕರಪತ್ರ ಮುದ್ರಕರ ಹೆಸರೂ ನಮೂದಾಗಿಲ್ಲ.
ಕ್ರಮಕ್ಕೆ ಒತ್ತಾಯ: ಈ ಧಾರ್ಮಿಕ ಕಾರ್ಯಕ್ರಮ ಕೆ.ಎಸ್. ಈಶ್ವರಪ್ಪ ಕೃಪಾಪೋಷಿತ ಕಾರ್ಯಕ್ರಮವಾಗಿದ್ದು, ಸಂಬಂಧಿಸಿದವರ ವಿರುದ್ಧ ತನಿಖೆ ಕೈಗೊಂಡು ಕಾನೂನು ಕ್ರಮಕೈಗೊಳ್ಳಬೇಕು, ಪ್ರಾಮಾಣಿಕ ಚುನಾವಣೆ ನಡೆಯುವಂತೆ ನೋಡಿಕೊಳ್ಳಬೇಕೆಂದು ದೂರು ಪತ್ರದಲ್ಲಿ ಕೋರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

