ನಿರೀಕ್ಷಣಾ ಜಾಮೀನಿಗೆ ಈಶ್ವರಪ್ಪ ಅರ್ಜಿ
ಶಿವಮೊಗ್ಗ: ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಸಾಮಾಜಿಕ ಸಾಮರಸ್ಯಕ್ಕೆ ಭಂಗ ತಂದ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ಎದುರಿಸುತ್ತಿರುವ ಡಿಸಿಎಂ ಹಾಗೂ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಬಂಧನ ಭೀತಿ ಎದುರಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಕೆ.ಎಸ್. ಈಶ್ವರಪ್ಪನವರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಸೋಮವಾರ ತಮ್ಮ ವಕೀಲ ಅಶೋಕ್ ಜಿ.ಭಟ್ ಮೂಲಕ ಸಿಆರ್ಪಿಸಿ ಕಲಂ 438ರ ಅಡಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಕೆ.ಎಸ್. ಈಶ್ವರಪ್ಪನವರು ಏ.9ರಂದು ನಗರದ ಗಾಯಿತ್ರಿ ಮಾಂಗಲ್ಯ ಮಂದಿರದಲ್ಲಿ ವಿಪ್ರ ವೇದಿಕೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಭಾಷಣ ಮಾಡಿದ್ದರು. ಶಿವಮೊಗ್ಗವೊಂದರಲ್ಲಿಯೇ 68 ಬ್ರಾಹ್ಮಣ ಹೆಣ್ಣು ಮಕ್ಕಳನ್ನು ಮುಸ್ಲಿಂ ಯುವಕರು ಲವ್ ಜಿಹಾದ್ ಹೆಸರಿನಲ್ಲಿ ಹೊತ್ತೊಯ್ದಿದ್ದಾರೆ ಎಂದು ಹೇಳಿದ್ದರು. ಇದರ ಜೊತೆಗೆ ಅನೇಕ ಸಂಗತಿಗಳನ್ನು ಪ್ರಸ್ತಾಪಿಸಿದ್ದರು.
ಈ ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಸೂಚನೆಯ ಮೇರೆಗೆ ಶಿವಮೊಗ್ಗ ವಿಧಾನಸಭಾ ಕ್ಷೇತ್ರ - 113ರ ಫ್ಲೈಯಿಂಗ್ ಸ್ಕ್ವಾಡ್ ತಂಡ -4ರ ಮುಖ್ಯಸ್ಥರು ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

