ಸಹ್ಯಾದ್ರಿ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ
ಶಿವಮೊಗ್ಗ: ನಗರದ ಸಹ್ಯಾದ್ರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಾ. ಕುಂಸಿ ಉಮೇಶ್, ಅಂಬೇಡ್ಕರ್ ಅವರ ವ್ಯಕ್ತಿತ್ವ, ಸಿದ್ಧಾಂತಗಳನ್ನು ಜನ ಬಹಳ ಸೀಮಿತ ಅರ್ಥದಲ್ಲಿ ಸ್ವೀಕರಿಸುವ ಮನೋಭಾವ ಹೊಂದಿರುವುದು ನಿಜಕ್ಕೂ ವಿಷಾದಕರ. ಈ ದೇಶದ ಸಂವಿಧಾನಕ್ಕೆ ಹೊಸ ಆಯಾಮ ನೀಡಿದ ಕೀರ್ತಿ ಅಂಬೇಡ್ಕರ್‌ರವರಿಗೆ ಸಲ್ಲಬೇಕು ಎಂದರು.
ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಸೇರಿದಂತೆ ಮಾನವನ ಮೂಲಭೂತ ಹಕ್ಕುಗಳ ಬಗ್ಗೆ ಮಾತನಾಡಿದ ಅಂಬೇಡ್ಕರ್ ಅವರನ್ನು ಕೇವಲ ದಲಿತ ಪ್ರತಿನಿಧಿಯಾಗಿ ಮಾತ್ರ ನೋಡುತ್ತಿದ್ದೇವೆ. ಪ್ರಜಾಪ್ರಭುತ್ವಕ್ಕೆ ಸಮಾನತೆ ಎಂಬ ಪರ್ಯಾಯ ಆಲೋಚನ ಕ್ರಮವನ್ನು ಸೃಷ್ಟಿಸಲು ಅಂಬೇಡ್ಕರ್ ಹಂಬಲಿಸಿದ್ದರು. ಆದರೆ, ಅದನ್ನು ಇಂದಿಗೂ ಸಾಧಿಸಲಾಗದಿರುವುದು ಪ್ರಜಾಪ್ರಭುತ್ವದ ದುರಂತ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ವಿದ್ಯಾರ್ಥಿ ಕ್ಷೇಮಾಧಿಕಾರಿ ಎಂ. ಹಾಲಮ್ಮ, ಈ ರಾಷ್ಟ್ರದ ಸಂಸ್ಕೃತಿಯನ್ನು ಜನಾಂದೋಲನದ ಮೂಲಕ ಪ್ರಶ್ನಿಸಿ ಸ್ಪಷ್ಟ ಸಂಸ್ಕೃತಿಯನ್ನು ರೂಪಿಸಿದ ಮಹಾನನ್ಚಿಂತಕ ಅಂಬೇಡ್ಕರ್. ಅಧಿಕಾರಶಾಹಿ ಸಂಸ್ಕೃತಿಯನ್ನು ಪ್ರಶ್ನಿಸುತ್ತಲೇ ಸಮಾನತೆಯನ್ನು ಬೆಳೆಸಿದ ಅಂಬೇಡ್ಕರ್, ಪ್ರಸ್ತುತ ತಲೆದೊರಿರುವ ಸಾಮಾಜಿಕ ಜ್ವಲಂತ ಸಮಸ್ಯೆಗಳಿಗೆ ತಮ್ಮ ಬರವಣಿಗೆಯಲ್ಲಿ ಅಂದೇ ಉತ್ತರಿಸಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲ ಡಾ.ಎಚ್. ಜಯದೇವಪ್ಪ, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಗುರುಮೂರ್ತಿ, ಉಪನ್ಯಾಸಕ ಜಿ.ಆರ್. ಲವಾ, ಕವಿರಾಜ್ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

