'ಕಾಂಗ್ರೆಸ್ ಗೊಂದಲದ ಗೂಡು'
ಕ.ಪ್ರ.ವಾರ್ತೆ, ಶಿವಮೊಗ್ಗ, ಏ.16 ಗೊಂದಲದ ಗೂಡಾಗಿರುವ ಕಾಂಗ್ರೆಸನ್ನು ಜನ ತಿರಸ್ಕರಿಸುತ್ತಾರೆ. ಪಕ್ಷದ ಗೊಂದಲ ಅಭ್ಯರ್ಥಿ ಆಯ್ಕೆ ಸಂದರ್ಭದಲ್ಲಿ ಸುಸ್ಪಷ್ಟವಾಗಿದೆ ಎಂದು ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
ನಗರದಲ್ಲಿ ಮಂಗಳವಾರ ಪಕ್ಷದ ಕಾರ್ಯಾಲಯದಲ್ಲಿ ನೂತನವಾಗಿ ಪಕ್ಷಕ್ಕೆ ಸೇರ್ಪಡೆಯಾದ ಹಲವರನ್ನು ಸ್ವಾಗತಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಗೊಂದಲವಿದೆ ಎಂದು ಅವರು 5 ವರ್ಷವೂ ಹೇಳಿದರು. ಅದನ್ನು ನಿವಾರಿಸುವ ಶಕ್ತಿ ನಮಗಿದೆ ಎಂದಿದ್ದೆವು. ನಮ್ಮಲ್ಲಿ ಗೊಂದಲವಿದ್ದರೂ ಕಾಂಗ್ರೆಸ್‌ನಂತೆ ಬೀದಿಗೆ ಬರಲಿಲ್ಲ. ಕಾಂಗ್ರೆಸ್ ಸ್ಥಿತಿ ನೋಡಿಯೇ ಜನ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ನಾಯಕತ್ವ ವೈಫಲ್ಯ: ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿಯನ್ನೇ ಘೋಷಿಸಿಲ್ಲ. ಆದರೂ ಸಿದ್ದರಾಮಯ್ಯ, ಪರಮೇಶ್ವರ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ತಾವೇ ಮುಖ್ಯಮಂತ್ರಿಯಾಗುವುದಾಗಿ ಹೇಳುತ್ತಿದ್ದಾರೆ. ಇದು ಅವರ ನಾಯಕತ್ವದ ವಿಫಲತೆಯನ್ನು ತೋರಿಸುತ್ತದೆ. ಕೆಪಿಸಿಸಿ ಕಚೇರಿ ಎದುರು, ಮಂಡ್ಯದಲ್ಲಿ, ಬಳ್ಳಾರಿಯಲ್ಲಿ ಕಾಂಗ್ರೆಸ್ ಭಿನ್ನಮತ ಬೀದಿಗೆ ಬಿದ್ದಿದೆ. ರಾಜ್ಯದ ಜನ ಇದನ್ನು ಗಮನಿಸುತ್ತಿದ್ದಾರೆ ಎಂದರು.
ಬಿಎಸ್‌ವೈಗೆ ಒಳ್ಳೇದಾಗ್ಲಿ: ಯಾರು ಆಯ್ಕೆಯಾಗುತ್ತಾರೆ ಎಂಬುದು ಮತದಾರರಿಗೆ ಬಿಟ್ಟ ವಿಷಯ. ಆದರೆ ನಾವು ಯಡಿಯೂರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸುವುದಿಲ್ಲ. ಅವರಿಗೆ ವೈಯಕ್ತಿಕವಾಗಿ, ಚುನಾವಣೆಯಲ್ಲಿ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ ಎಂದು ಈಶ್ವರಪ್ಪ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

