ಅಕ್ರಮ ಮದ್ಯ: ವ್ಯಕ್ತಿ ಬಂಧನ
ಶಿವಮೊಗ್ಗ: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರದ ಓಟಿ ರಸ್ತೆಯಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಆರೋಪಿಯೊಬ್ಬನನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ ಘಟನೆ ಬುಧವಾರ ನಡೆದಿದೆ.
ವೆಂಕಟೇಶ್ ಬಂಧಿತ ಆರೋಪಿ. ಈತ ನಗರದ ಓಟಿ ರಸ್ತೆಯಲ್ಲಿ ಟಿವಿಎಸ್ ಎಕ್ಸೆಲ್‌ನಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದಾರೆ. ಬಂಧಿತನಿಂದ ಒಂದ ಟಿವಿಎಸ್ ಎಕ್ಸೆಲ್, 35 ಲೀಟರ್ ಮದ್ಯ ಹಾಗೂ 8ಲೀಟರ್ ಬಿಯರ್‌ನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಲ ಮೌಲ್ಯ 50 ಸಾವಿರ ರುಪಾಯಿ ಎಂದು ಅಂದಾಜಿಸಲಾಗಿದೆ.
ಕಾರ್ಯಚರಣೆಯಲ್ಲಿ ಅಬಕಾರಿ ಉಪಆಯುಕ್ತ ರಾಜೇಂದ್ರ ಪ್ರಸಾದ, ನಿರೀಕ್ಷಕ ಡಿ.ಎನ್. ಹನುಮಂತಪ್ಪ, ಉಪ ನಿರೀಕ್ಷಕ ಎಚ್.ವಿ. ಮಂಜಯ್ಯ, ಎಸ್.ಡಿ. ಚಂದ್ರಪ್ಪ, ಮಡಿವಾಳಪ್ಪ, ವೆಂಕಟೇಶ್ ಮತ್ತಿತರರು ಇದ್ದರು.
--
'ಬೆಂಗಳೂರು ಸ್ಪೋಟ ಖಂಡನೀಯ'
ಶಿವಮೊಗ್ಗ: ಇದು ಪ್ರಜಾಪ್ರಭುತ್ವ ವಿರೋಧಿ ಕೃತ್ಯ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಬಾಂಬ್ ಸ್ಪೋಟ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ನಗರದಲ್ಲಿ ಬುಧವಾರ ಬೆಂಗಳೂರು ಬಿಜೆಪಿ ಕಚೇರಿ ಎದುರು ಸಂಭವಿಸಿದ ಬಾಂಬ್ ಸ್ಪೋಟ ಘಟನೆಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲೇ ಈ ಘಟನೆ ನಡೆದಿರುವುದು ದುರಾದೃಷ್ಟಕರ. ಬಾಂಬ್ ಸ್ಪೋಟದಿಂದ ಶಾಂತಿಯುತ ಚುನಾವಣಾ ಪ್ರಕ್ರಿಯೆಗೆ ಅಡ್ಡಿಪಡಿಸುವ ಕೃತ್ಯ ನಡೆದಿದೆ. ಯಾರೂ ಇಂತಹ ಬೆದರಿಕೆಗೆ ಬಗ್ಗುವ ಅವಶ್ಯಕತೆ ಇಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

