ಕಾಂಗ್ರೆಸ್, ಬಿಜೆಪಿ, ಜೆಡಿಯು ನಾಮಪತ್ರ
ತೀರ್ಥಹಳ್ಳಿ: ಏ.17ರ ಬುಧವಾರ ಇಲ್ಲಿ 3 ನಾಮಪತ್ರಗಳು ಸಲ್ಲಿಕೆಯಾದವು. ಚುನಾವಣಾ ಕಣದಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಚುನಾವಣಾಧಿಕಾರಿಗಳಗೆ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿ.ಎಸ್. ನಾರಾಯಣ ರಾವ್ ಮೊದಲಾದವರು ಜೊತೆಯಲ್ಲಿದ್ದರು.
ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಮುಖಂಡ ನಾಗರಾಜಶೆಟ್ಟಿ, ಡಿ. ಲಕ್ಷ್ಮಣ್ ಮೊದಲಾದವರು ಜೊತೆಯಲ್ಲಿದ್ದರು. ಜೆಡಿಯು ಅಭ್ಯರ್ಥಿಯಾಗಿ ಮುಂಬಾರಿನ ಡಿ.ನಾಗರಾಜ್ ನಾಮಪತ್ರ ಸಲ್ಲಿಸಿದರು.
ಅಭಿವೃದ್ಧಿಗೆ ರು. 200 ಕೋಟಿ
ತೀರ್ಥಹಳ್ಳಿ: ತೀರ್ಥಹಳ್ಳಿ ಕ್ಷೇತ್ರ ಅತ್ಯಂತ ದೊಡ್ಡ ಕ್ಷೇತ್ರವಾಗಿದ್ದು, ಗ್ರಾಮಾಂತರ ಪ್ರದೇಶಗಳಲ್ಲಿ 500 ಕಿಮೀ ರಸ್ತೆ ಅಭಿವೃದ್ಧಿಪಡಿಸುವ ಅಗತ್ಯ ಇನ್ನೂ ಇದೆ. 5 ವರ್ಷದಲ್ಲಿ ಕ್ಷೇತ್ರಕ್ಕೆ ರು. 200 ಕೋಟಿಗೂ ಹೆಚ್ಚಿನ ಅನುದಾನ ತಂದಿದ್ದು, ಶಕ್ತಿಮೀರಿ ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡಿದ್ದೇನೆ ಎಂದು ಶಾಸಕ ಕಿಮ್ಮನೆ ರತ್ನಾಕರ್ ಹೇಳಿದರು.
ಬುಧವಾರ ನಾಮಪತ್ರ ಸಲ್ಲಿಸಿದ ನಂತರ ಟಿಎಪಿಸಿಎಂಎಸ್ ಸಭಾಂಗಣದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ವಿಧಾನಸಭೆಯಲ್ಲಿ ಶೇ.100 ಸಭೆಗಳಲ್ಲಿ ಭಾಗವಹಿಸಿ ಕ್ಷೇತ್ರದ ಸಮಸ್ಯೆಯನ್ನು ಯಶಸ್ವಿಯಾಗಿ ಸದನದಲ್ಲಿ ಮಂಡಿಸಿದ್ದೇನೆ. ನನ್ನ ಕಾರ್ಯಕ್ಷಮತೆ ಬಗ್ಗೆ ವಿರೋಧಿ ಸದಸ್ಯರೂ ಮೆಚ್ಚುಗೆ ಸೂಚಿಸಿದ್ದಾರೆ. ಕ್ಷೇತ್ರದ ನಿಷ್ಠಾವಂತ ರಾಜಕಾರಣಕ್ಕೆ ಚ್ಯುತಿ ಬರದಂತೆ ಕೆಲಸ ಮಾಡಿದ್ದೇನೆ. ಮತ್ತೊಮ್ಮೆ ಮತನೀಡಿ ಕ್ಷೇತ್ರ ಪ್ರತಿನಿಧಿಸುವ ಅವಕಾಶ ಕಲ್ಪಿಸಿಕೊಡಲು ಕೋರಿದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಎಐಸಿಸಿ ವೀಕ್ಷಕ ಜಿತೇಂದ್ರ ದೇಶಮುಖ್ ಪ್ರಭು ಈ ಸಂದರ್ಭದಲ್ಲಿ ಹಾಜರಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಈ ಬಾರಿ ಅಧಿಕಾರ ಪಡೆಯಲಿದ್ದು, ತೀರ್ಥಹಳ್ಳಿ ಕ್ಷೇತ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ಪಕ್ಷವನ್ನು ಬಲಗೊಳಿಸುವಂತೆ ಸಲಹೆ ನೀಡಿದರು.
ಮಾಜಿ ಶಾಸಕ ಬಿ. ಸ್ವಾಮಿರಾವ್, ಜೆ.ಡಿ. ನಾರಾಯಣಪ್ಪ, ಪಟ್ಟಮಕ್ಕಿ ರತ್ನಾಕರ್, ಕಡಿದಾಳು ದಿವಾಕರ್ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ ಹೆಗ್ಡೆ, ಜಿ.ಎಸ್. ನಾರಾಯಣ ರಾವ್, ಡಿ.ಎಸ್. ವಿಶ್ವನಾಥ ಶೆಟ್ಟಿ, ಜಿಪಂ ಸದಸ್ಯ ಕಲಗೋಡು ರತ್ನಾಕರ್, ತಾಪಂ ಅಧ್ಯಕ್ಷೆ ಜೀನಾ ವಿಕ್ಟರ್ ಡಿಸೋಜ, ಕೆಸ್ತೂರು ಮಂಜುನಾಥ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

