ಶಿವಮೊಗ್ಗ

ಗುಡ್ಡಪ್ಪ ನಾಮಪತ್ರ

Published On :

ಸೊರಬ: ದಲಿತ, ಶೋಷಿತರನ್ನು ಅರ್ಥ ಮಾಡಿಕೊಂಡ ಪಕ್ಷ ಬಹುಜನ ಸಮಾಜ ಪಕ್ಷ, ಈ ಪಕ್ಷದಲ್ಲಿ ನೊಂದವರಿಗೆ ಸಾಂತ್ವನವಿದೆ ಎಂದು ಎಲ್.ಜಿ. ಗುಡ್ಡಪ್ಪ ತಿಳಿಸಿದರು.
 ಕ್ಷೇತ್ರಕ್ಕೆ ಬಿಎಸ್ಪಿಯಿಂದ ಸ್ಪರ್ಧಿಸಿರುವ ಅವರು ಬುಧವಾರ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ತಾನು ಆರ್ಥಿಕವಾಗಿ ಹಿಂದುಳಿದ ಕುಟುಂಬದಿಂದ ಬೆಳೆದಿದ್ದು, ಅಂತವರ ಆಂತರಿಕ ತುಮಲಗಳೇನೆಂದು ಅರ್ಥೈಸಿಕೊಂಡಿದ್ದೇನೆ. ಅಂತವರ ಪಾಲಿಗೆ ನೆಮ್ಮದಿ ಬದುಕು ನೀಡಿ, ಸಮಾಜಮುಖಿಯಾಗಿ ಕಾರ್ಯನಿರ್ವಹಿಸಲು ಬಯಸಿದ್ದೇನೆ. ಈ ಹಿನ್ನೆಲೆಯಲ್ಲಿ ಬಹುಜನ ಸಮಾಜ ಪಕ್ಷವನ್ನು ಬೆಂಬಲಿಸುವ ಮೂಲಕ ತಾಲೂಕು ನೆಮ್ಮದಿ ಕಾಣುವಂತಾಗಬೇಕು ಎಂಬ ಮಹದಾಸೆ ನನ್ನದು ಎಂದರು.
 ಪಕ್ಷದ ತಾಲೂಕು ಅಧ್ಯಕ್ಷ ಲಕ್ಷ್ಮಣ ವಕೀಲ್, ಕಾರ್ಯದರ್ಶಿ ವಿನಾಯಕ, ಅರುಣ್‌ಕುಮಾರ್, ಮಹಿಳಾ ಸಂಚಾಲಕಿ ದಿಲ್ಶಾದ್ ಬೇಗಂ ಇದ್ದರು.
--
ಶ್ರೀಕಾಂತ್ ನಾಮಪತ್ರ
ಶಿವಮೊಗ್ಗ: ಕಳೆದ ಚುನಾವಣೆಯಲ್ಲಿ ಸೋತಿದ್ದರೂ ಜನರೊಂದಿಗೆ ಒಡನಾಟ ಬೆಳಸಿಕೊಂಡು ಅವರ ಕಷ್ಟ-ಸುಖಗಳಿಗೆ ಸ್ಪಂದಿಸಿದ್ದೇನೆ. ಈ ಹಿನ್ನೆಲೆಯಲ್ಲಿ ಈ ಬಾರಿ ಚುನಾವಣೆಯಲ್ಲಿ ನಮಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ. ಶ್ರೀಕಾಂತ್ ಹೇಳಿದರು.
 ಬುಧವಾರ ನಗರಸಭೆ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಕ್ಷೇತ್ರ ಅಭಿವೃದ್ಧಿ ಮಾಡುವುದಕ್ಕಿಂತ ಸ್ವ ಅಭಿವೃದ್ಧಿಯಾಗಿದ್ದಾರೆ. ಆದ್ದರಿಂದ ಈ ಬಾರಿ ಜನ ಜೆಡಿಎಸ್ ಕಡೆ ಮುಖ ಮಾಡಿದ್ದು, ಹೆಚ್ಚು ಬಹುಮತಗಳೊಂದಿಗೆ ನಮ್ಮನ್ನು ಗೆಲ್ಲಿಸುತ್ತಾರೆ ಎಂದು ವಿಶ್ವಾಸವ್ಯಕ್ತಪಡಿಸಿದರು.
ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಸ್ಥಳೀಯ ಬಿಜೆಪಿ ನಾಯಕರು ಮಾಡಿದ್ದಾರೆ. ಅಲ್ಲದೇ, ಬಡ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಅವರಿಂದ ಸಾಧ್ಯವಾಗಿಲ್ಲ. ಇಂತಹ ಪಕ್ಷವನ್ನು ಜನ ದೂರವಿಡಲು ನಿರ್ಧರಿಸಿದ್ದಾರೆ. ಆದ್ದರಿಂದ ಈ ಬಾರಿ ತಮ್ಮ ಗೆಲುವು ನಿಶ್ಚಿತ ಎಂದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.