ಶಿವಮೊಗ್ಗ

ಏಳು ವಿಧಾನಸಭಾ ಕ್ಷೇತ್ರದಿಂದ ಕಣದಲ್ಲಿ 102 ಅಭ್ಯರ್ಥಿಗಳು

Published On :

ಶಿವಮೊಗ್ಗ: ನಾಮಪತ್ರ ಪರಿಶೀಲನೆಯ ನಂತರ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 102 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಟ್ಟು 184 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಇದರಲ್ಲಿ ಮೂರು ನಾಮಪತ್ರಗಳು ತಿರಸ್ಕೃತವಾಗಿವೆ.
 ನಾಮಪತ್ರ ವಾಪಸು ಪಡೆಯಲು ಏ.20 ಕೊನೆಯ ದಿನವಾಗಿದ್ದು, ನಂತರವೇ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಅಂತಿಮ ಪಟ್ಟಿ ಗೊತ್ತಾಗುವುದು. ಭದ್ರಾವತಿ ಕ್ಷೇತ್ರದಿಂದ ಹಾಲಿ ಶಾಸಕ ಬಿ.ಕೆ. ಸಂಗಮೇಶ್ವರ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸಲ್ಲಿಸಿದ್ದ ಎರಡು ನಾಮಪತ್ರಗಳು ಬಿ ಫಾರಂ ಇಲ್ಲದ ಕಾರಣ ತಿರಸ್ಕೃತವಾಗಿವೆ. ಆದರೆ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸಲ್ಲಿಸಿದ್ದ ನಾಮಪತ್ರ ಅಂಗೀಕೃತವಾಗಿದೆ.
 ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ನ್ಯಾಷನಲ್ ಪೀಪಲ್ಸ್ ಪಾರ್ಟಿಯ ಪಾರ್ವತಿ ಬಾಯಿ ಎನ್. ಅವರು ಸಲ್ಲಿಸಿದ್ದ ನಾಮಪತ್ರ ತಿರಸ್ಕೃತವಾಗಿದೆ. ಪ್ರಾದೇಶಿಕ ಪಕ್ಷವಾದ ಕಾರಣ ಇವರು ನಾಮಪತ್ರದೊಂದಿಗೆ 10 ಸೂಚಕ ಸಹಿ ಇರಬೇಕಿತ್ತು. ಆದರೆ ಒಬ್ಬ ಸೂಚಕರ ಸಹಿ ಮಾತ್ರ ಇದ್ದುದರಿಂದ ತಿರಸ್ಕೃತವಾಗಿದೆ. ಇವರು ಒಂದೇ ನಾಮಪತ್ರ ಸಲ್ಲಿಸಿದ್ದು, ಇವರ ಉಮೇದುವಾರಿಕೆ ಇರುವುದಿಲ್ಲ.
 ಭಾರತೀಯ ಜನತಾ ಪಕ್ಷ, ಕರ್ನಾಟಕ ಜನತಾ ಪಕ್ಷ, ಕಾಂಗ್ರೆಸ್ ಹಾಗೂ ಜಾತ್ಯತೀತ ಜನತಾದಳ ಅಭ್ಯರ್ಥಿಗಳು ಎಲ್ಲಾ 7 ಕ್ಷೇತ್ರಗಳಲ್ಲೂ ಸ್ಪರ್ಧಿಸಿದ್ದಾರೆ.
  ಬಹುಜನ ಸಮಾಜ ಪಕ್ಷ ಶಿವಮೊಗ್ಗ ಕ್ಷೇತ್ರ ಹೊರತುಪಡಿಸಿ ಉಳಿದ ಎಲ್ಲಾ ಕ್ಷೇತ್ರಗಳಲ್ಲಿದ್ದಾರೆ. ಕೆಜೆಪಿ ಹೊರತುಪಡಿಸಿ ಪ್ರಾದೇಶಿಕ ಪಕ್ಷಗಳ 19 ಅಭ್ಯರ್ಥಿಗಳು, 49 ಪಕ್ಷೇತರ ಅಭ್ಯರ್ಥಿಗಳಿದ್ದಾರೆ.
ಪಕ್ಷಗಳ ಕಚೇರಿಗೆ ಭದ್ರತೆ
ಬೆಂಗಳೂರು ಬಿಜೆಪಿ ಕಚೇರಿ ಎದುರು ಬಾಂಬ್ ಸ್ಪೋಟವಾದ ಹಿನ್ನಲೆಯಲ್ಲಿ ಜಿಲ್ಲೆಯ ರಾಜಕೀಯ ಪಕ್ಷಗಳ ಕಚೇರಿಗಳಿಗೆ ಭದ್ರತೆ ಒದಗಿಸಲಾಗಿದೆ.
   ಪೊಲೀಸ್ ಸಿಬ್ಬಂದಿ ಜತೆಗೆ ಬಿಎಸ್‌ಎಫ್ ಯೋಧರನ್ನೂ ನಿಯೋಜಿಸಲಾಗಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಜೆಡಿಯು, ಬಿಎಸ್‌ಆರ್ ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷಗಳ ಕಚೇರಿಗೂ ಭದ್ರತೆ ಒದಗಿಸಲಾಗಿದೆ.
    ರಾಜಕೀಯ ಪಕ್ಷಗಳಿಗೆ ಕಚೇರಿ ಎದುರು ಪೊಲೀಸರು ನಿಂತಿರುವುದು ಕಿರಿಕಿರಿಗೆ ಕಾರಣವಾಗಿದೆ. ಬಹುತೇಕ ಚಟುವಟಿಕೆಗಳನ್ನು ಈಗ ಬೇರೆಡೆ ನಡೆಸಬೇಕಾಗಿದೆ ಎಂದು ಕಾರ್ಯಕರ್ತರು ಗೊಣಗುತ್ತಿದ್ದುದು ಕಂಡುಬಂತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.