ಭದ್ರಾ ಎಡ ನಾಲೆಗೆ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ
ಶಿವಮೊಗ್ಗ: ಭದ್ರಾ ಎಡ ನಾಲೆಗೆ ನೀರು ಹರಿಸುವಂತೆ ಒತ್ತಾಯಿಸಿ ಗುರುವಾರ ತಾಲೂಕಿನ ವಿವಿಧ ಗ್ರಾಮಗಳ ರೈತರು ಭದ್ರಾ ಅಚ್ಚುಕಟ್ಟು ಪ್ರಾಧಿಕಾರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಪಿಳ್ಳಂಗೆರೆ, ಜಾವಳ್ಳಿ, ಹಾರೋಬೆನವಳ್ಳಿ, ಬೀರನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ್ದ ನೂರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಕಳೆದ ಹಲವು ದಿನಗಳಿಂದ ಎಡ ನಾಲೆಗೆ ನೀರು ಹರಿಸುವುದನ್ನು ನಿಲ್ಲಿಸಿರುವುದರಿಂದ ನಾಲೆಯ ಕೊನೆಯ ಭಾಗದ ರೈತರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ ಎಂಬುದು ಪ್ರತಿಭಟನಾಕಾರರ ಆರೋಪವಾಗಿತ್ತು.
ನೀರಿಲ್ಲದೆ ಕಷ್ಟಪಟ್ಟು ಬೆಳೆದಿರುವ ಕಬ್ಬು ಸೇರಿದಂತೆ ತೋಟದ ಬೆಳೆಗಳು ಒಣಗುವ ಹಂತಕ್ಕೆ ಬಂದಿವೆ. ಇದರಿಂದ ಬೆಳೆಗಾರರು ಚಿಂತಾಕ್ರಾಂತರಾಗಿದ್ದಾರೆ. ಸಾವಿರಾರು ರುಪಾಯಿ ನಷ್ಟ ಅನುಭವಿಸುವ ಸ್ಥಿತಿಗೆ ಬಂದಿದ್ದಾರೆ ಎಂದು ರೈತರು ಅಳಲು ತೋಡಿಕೊಂಡರು. ಎಡ ನಾಲೆಗೆ ನೀರು ಬಿಡುವಂತೆ ಒತ್ತಾಯಿಸಿ ಅನೇಕ ಬಾರಿ ಮನವಿ ಮಾಡಲಾಗಿದೆ. ಆದರೆ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಎಡ ನಾಲೆಗೆ ನೀರು ಹರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಅಧಿಕಾರಿಗಳಿಗೆ ರೈತರು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ತಾಪಂ ಸದಸ್ಯ ಎ.ನಾಗರಾಜ್, ಕೃಷ್ಣಮೂರ್ತಿ, ಲಿಂಗಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

