ಭಾರತೀಯ ಸಂಸ್ಕೃತಿಯಲ್ಲಿ ಆಡಂಬರವಿಲ್ಲ
ಕ.ಪ್ರ ವಾರ್ತೆ, ಶಿವಮೊಗ್ಗ, ಏ.18
ಭಾರತದ ಸಂಸ್ಕೃತಿ ಆಡಂಬರದ ಸಂಸ್ಕೃತಿಯಲ್ಲ. ಅದು ತನ್ನದೇ ಆದ ಮಾನವೀಯ ಮೌಲ್ಯಗಳನ್ನು ಹೊಂದಿದೆ ಎಂದು ಮೈಸೂರಿನ ರಂಗ ನಿರ್ದೇಶಕ ಎಚ್. ಜನಾರ್ದನ್ ಹೇಳಿದರು.
ಸಹ್ಯಾದ್ರಿ ಕಲಾ ಮತ್ತು ವಾಣಿಜ್ಯ ಕಾಲೇಜು ಆವರಣದಲ್ಲಿ ಗುರುವಾರ ಆಯೋಜಿಸಿದ್ದ ವಿದ್ಯಾರ್ಥಿ ಸಾಂಸ್ಕೃತಿಕ ಸಂಘ ಹಾಗೂ ಕ್ರೀಡಾ ಮತ್ತು ಸಾಂಸ್ಕೃತಿಕ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಇಂತಹ ಸಂಸ್ಕೃತಿಯನ್ನು ವಿದ್ಯಾರ್ಥಿಗಳು ಬೆಳೆಸಿ, ಉಳಿಸಿಕೊಂಡಾಗ ಭವಿಷ್ಯದಲ್ಲಿ ಉತ್ತಮ ಜೀವನ ನಡೆಸಬಹುದು ಎಂದರು.
ಭಾರತೀಯ ಸಂಸ್ಕೃತಿ ಸುಲಭವಾಗಿ ಲಭಿಸುವಂತದ್ದಲ್ಲ. ಅದು ಶಾಂತಿ, ಸಮಾನತೆ, ಸೌಹಾರ್ಧತೆ, ಸಂಬಂಧಗಳ ಬೀಜವನ್ನು ಬಿತ್ತುವ ಒಂದು ವ್ಯವಸ್ಥೆ. ಇಂತಹ ವ್ಯವಸ್ಥೆಯಲ್ಲಿ ಕಟ್ಟಿದ ಸಮಾಜ ಎಂದಿಗೂ ಸುಭದ್ರವಾಗಿರುತ್ತದೆ. ಇದನ್ನು ರೂಪುಗೊಳಿಸಿದ ಮಹನೀಯರಿಗೆ ಪ್ರತಿಯೊಬ್ಬರು ತಲೆಬಾಗಬೇಕು ಎಂದರು.
ಸಮಾಜ ನಿರ್ಮಾಣ: ಸಾಂಸ್ಕೃತಿಕವಾಗಿ ವಿದ್ಯಾರ್ಥಿಗಳು ಸಂಘಟಿತರಾಗಬೇಕು. ಆಗ ಮಾತ್ರ ಉತ್ತಮ ಸಂಸ್ಕಾರಯುತ ಸಮಾಜ ನಿರ್ಮಾಣ ಮಾಡಲು ಸಾಧ್ಯ. ನಾಡಿನ ಸಂಸ್ಕೃತಿ ಉಳಿಸುವುದಕ್ಕೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರಯತ್ನಿಸಬೇಕು. ಪ್ರತಿಯೊಬ್ಬ ವ್ಯಕ್ತಿ ಸುಸಂಸ್ಕೃತನಾಗಿ ನಡೆದುಕೊಳ್ಳಬೇಕು ಎಂದು ತಿಳಿಸಿದರು.
ವಿದ್ಯಾರ್ಥಿಗಳಿಗೆ ಪಠ್ಯದ ಶಿಕ್ಷಣ ನೀಡುವುದರೊಂದಿಗೆ ಸಂಸ್ಕೃತಿಯ ಅರಿವನ್ನು ತಿಳಿಸುವ ಶಿಕ್ಷಣವನ್ನು ಶಿಕ್ಷಕರು ನೀಡಬೇಕು. ಅಹಂಕಾರವಿಲ್ಲದ ವ್ಯಕ್ತಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯ. ಅಂತಹ ವ್ಯಕ್ತಿಯನ್ನು ಗೌರವಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಮೇಲಿದೆ ಎಂದರು.
ಸನ್ಮಾನ: ಇದೇ ವೇಳೆ ರಂಗನಿರ್ದೇಶಕ ಎಚ್. ಜನಾರ್ದನ್ ಮತ್ತು ಸಂಗಡಿಗರಿಂದ ಗಾಯನ ಕಾರ್ಯಕ್ರಮ ನಡೆಯಿತು. ಅಂತಾರಾಷ್ಟ್ರೀಯ ಕುಸ್ತಿಪಟು ಮಹಮದ್ ರಫೀಕ್ ಓಳಿ, ರಾಜ್ಯ ಪ್ರಶಸ್ತಿ ಪುರಸ್ಕೃತ ಯೋಗಾಚಾರ್ಯ, ಡಾ.ಟಿ.ವಿ. ರುದ್ರರಾಧ್ಯ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಎಚ್. ಜಯದೇವಪ್ಪ, ಸುಗಮ ಸಂಗೀತ ಗಾಯಕ ದೇವಾನಂದ ವರಪ್ರಸಾದ, ದತ್ತಾತ್ರೇಯ ಜೋಯ್ಸ್, ವಿದ್ಯಾರ್ಥಿ ಸಂಘದ ಸಂಚಾಲಕ ಪ್ರೊ. ಚಂದ್ರಮೌಳಿ, ವಿದ್ಯಾರ್ಥಿ ಕ್ಷೇಮಾಧಿಕಾರಿ ಹಾಲಮ್ಮ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

