ಕೊಪ್ಪಲು ಮಂಜಣ್ಣ ಬಿಜೆಪಿಯಿಂದ ನಾಮಪತ್ರ
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಶಿಕಾರಿಪುರ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಎಸ್.ಎಚ್. ಮಂಜುನಾಥ್ (ಕೊಪ್ಪಲು ಮಂಜಣ್ಣ) ಅವರು ನಾಮಪತ್ರ ಸಲ್ಲಿಸಿದರು.
ಮೊದಲಿನಿಂದಲೂ ಯಡಿಯೂರಪ್ಪ ವಿರೋಧಿ ರಾಜಕಾರಣ ಮಾಡುತ್ತಾ ಬಂದಿರುವ ಕೊಪ್ಪಲು ಮಂಜಣ್ಣ ಅವರು ಯಡಿಯೂರಪ್ಪ ಅವರು ಬಿಜೆಪಿ ತೊರೆದ ನಂತರ ಈ ಪಕ್ಷ ಸೇರಿದ್ದರು. ತಾಲೂಕು ಬಿಜೆಪಿ ಅಧ್ಯಕ್ಷರಾಗಿಯೂ ನೇಮಕವಾಗಿದ್ದರು. ಇವರ ತಂದೆ ಕೊಪ್ಪಲು ಹಾಲಪ್ಪ ಅವರು ಸತತ 30 ವರ್ಷ ಶಿಕಾರಿಪುರ ಪುರಸಭೆಅಧ್ಯಕ್ಷರಾಗಿದ್ದರು.
ಕೊಪ್ಪಲು ಮಂಜಣ್ಣ ಅವರು ಈ ಮೊದಲು ಕಾಂಗ್ರೆಸ್ನಲ್ಲಿದ್ದು, ನಂತರ ಜೆಡಿಎಸ್ ಸೇರ್ಪಡೆಯಾಗಿದ್ದರು. ಆದರೆ ಮುಖಂಡರೊಂದಿಗೆ ಭಿನ್ನಮತ ಉಂಟಾದ ಕಾರಣ ಯಡಿಯೂರಪ್ಪ ಇಲ್ಲದ ಬಿಜೆಪಿಗೆ ಸೇರಿದರು. ಈಗ ಅವರು ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷದ ಜಿಲ್ಲಾಧ್ಯಕ್ಷ ಆರ್.ಕೆ. ಸಿದ್ದರಾಮಣ್ಣ, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಎ.ಎಸ್. ಪದ್ಮನಾಭ ಭಟ್ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

