ಶಿವಮೊಗ್ಗ

ಬಿಜೆಪಿ ಪಾದಯಾತ್ರೆ, ಮನೆ ಮನೆ ಭೇಟಿ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ,  ಏ.19
ಚುನಾವಣಾ ಪ್ರಚಾರಕ್ಕೆ ವೇಗಕೊಟ್ಟಿರುವ ಬಿಜೆಪಿ ಮುಂದಿನ ಮೂರು ದಿನಗಳಲ್ಲಿ ಸಾಮೂಹಿಕ ಪಾದಯಾತ್ರೆ ಹಮ್ಮಿಕೊಂಡಿದೆ.
ಬಿಜೆಪಿ ಕಾರ್ಯಕರ್ತರು ಏಪ್ರಿಲ್ 20ರಿಂದ 23ರವರೆಗೆ ಬೆಳಿಗ್ಗೆ ಹಾಗೂ ಸಂಜೆ ವೇಳೆಯಲ್ಲಿ ಸಾಮೂಹಿಕ ಪಾದಯಾತ್ರೆ ನಡೆಸುವುದಾಗಿ ಡಿಸಿಎಂ ಈಶ್ವರಪ್ಪ ಸುದ್ದಿಗಾರರಿಗೆ ಮಾಹಿತಿ ನೀಡಿದರು.
ಮೊದಲ ಹಂತದಲ್ಲಿ ಪಾದಯಾತ್ರ ನಡೆದರೆ, ಎರಡನೇ ಹಂತದಲ್ಲಿ 23ರಿಂದ ಶಿವಮೊಗ್ಗ ವಿಧಾಸಭಾ ಕ್ಷೇತ್ರದ 217 ಬೂತ್‌ಗಳ ಬೂತ್ ಮಟ್ಟದ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತದಾರರನ್ನು ಸಂಪರ್ಕಿಸಿ ಬಿಜೆಪಿ ಸಾಧನೆಯನ್ನು ವಿವರಿಸಿ ಮತಯಾಚಿಸಲಿದ್ದಾರೆ ಎಂದು ಹೇಳಿದರು.
ಸೋಲಿನ ಭಯ: ಕಾಂಗ್ರೆಸ್‌ಗೆ ಸೋಲಿನ ಭಯ ಆವರಿಸಿದ್ದು, ಹೀಗಾಗಿ ಹತಾಶೆಯಿಂದಾಗಿ ಆ ಪಕ್ಷದ ನಾಯಕರು ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಈಶ್ವರಪ್ಪ ಟೀಕಿಸಿದರು.
ಹಣ ನೀಡಿ ಬೇರೆ ಪಕ್ಷದ ಕಾರ್ಯಕರ್ತರನ್ನು ಖರೀದಿಸುತ್ತಿರುವ ಆರೋಪ ಮಾಡುತ್ತಿರುವ ಆ ಪಕ್ಷದ ಮುಖಂಡರು ಮೊದಲು ತಮ್ಮ ಪಕ್ಷದ ಸ್ಥಿತಿಯನ್ನು ನೋಡಿಕೊಳ್ಳಲಿ. ನಗರದಲ್ಲಿ ಕಾಂಗ್ರೆಸ್ ಒಡೆದ ಮನೆಯಾಗಿದೆ. ಆ ಪಕ್ಷದ ಅಭ್ಯರ್ಥಿಯನ್ನು ಸೋಲಿಸಲು ಆ ಪಕ್ಷದ ಮುಖಂಡರೇ ಪ್ರಯತ್ನಿಸುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಶಾಸಕ ಕೆ.ಜಿ. ಕುಮಾರಸ್ವಾಮಿ, ಪಕ್ಷದ ಪ್ರಮುಖರಾದ ಎಸ್.ಎನ್. ಚನ್ನಬಸಪ್ಪ, ಎಸ್. ದತ್ತಾತ್ರಿ, ಜ್ಞಾನೇಶ್ವರ್, ನಟರಾಜ್, ಮಧುಸೂಧನ್ ಮತ್ತಿತರರು ಹಾಜರಿದ್ದರು.
ಪಕ್ಷಕ್ಕೆ ಸೇರ್ಪಡೆ: ಕೆಜೆಪಿ ಜಿಲ್ಲಾ ಉಪಾಧ್ಯಕ್ಷ ಡಿ. ರಾಜಶೇಖರ್, ಪ್ರಧಾನ ಕಾರ್ಯದರ್ಶಿ ಮಂಡೇನಕೊಪ್ಪ ಗಂಗಾಧರ್, ಕಾಶಿಪುರದ ಬಕೆಟ್ ಮಂಜು ಹಾಗೂ ಕಳೆದ ಚುನಾವಣೆಯಲ್ಲಿ ಕೆಜೆಪಿಯಿಂದ 7ನೇ ವಾರ್ಡ್‌ನಿಂದ ಸ್ಪರ್ಧಿಸಿದ್ದ ಶಂಕರ್ ಅವರು ಇದೇ ಸಂದರ್ಭದಲ್ಲಿ ಬಿಜೆಪಿ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಈಶ್ವರಪ್ಪ, ಬೇರೆ ಬೇರೆ ಪಕ್ಷಗಳಿಂದ ಬಿಜೆಪಿಯನ್ನು ಸೇರುತ್ತಿದ್ದು, ಇದರಿಂದ ಪಕ್ಷದ ಶಕ್ತಿ ಹೆಚ್ಚಾಗುತ್ತಿದೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.