ಕಾಗೋಡು ಗೆದ್ದರೆ ಸರ್ವಾಧಿಕಾರ
ಕನ್ನಡಪ್ರಭ ವಾರ್ತೆ, ಸಾಗರ, ಏ.23-
ಕಾಗೋಡು ತಿಮ್ಮಪ್ಪ ಗೆದ್ದು ಬಂದರೆ ಮತ್ತೆ ಕ್ಷೇತ್ರದಲ್ಲಿ ಸರ್ವಾಧಿಕಾರಿ ಆಡಳಿತ ಜಾರಿಗೆ ಬರುತ್ತದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು ಹೇಳಿದರು.
ತಾಲೂಕಿನ ಆನಂದಪುರಂ ಸಂತೆಮೈದಾನದಲ್ಲಿ ಏರ್ಪಡಿಸಿದ್ದ ಜಾತ್ಯತೀತ ಜನತಾದಳದ ಕಾರ್ಯಕರ್ತರ ಸಮಾವೇಶದಲ್ಲಿ ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸದ, ಜನಸಾಮಾನ್ಯರನ್ನು ಮಾತನಾಡಿಸಲು ಹಿಂದೆ ಮುಂದೆ ಯೋಚಿಸುವ ಕಾಗೋಡು ತಿಮ್ಮಪ್ಪ ಅವಧಿಯಲ್ಲಿ ಅವರು ರಾಜಕೀಯವಾಗಿ ಬೆಳೆದಿದ್ದನ್ನು ಬಿಟ್ಟರೆ ಬೇರೆಯವರನ್ನು ಬೆಳೆಯಲು ಬಿಟ್ಟಿಲ್ಲ ಎಂದು ಆರೋಪಿಸಿದರು.
ದಿಕ್ಕುತಪ್ಪಿಸುವ ರಾಜಕಾರಣ: ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದವರಿಗೆ ಬಗರ್ಹುಕುಂ ಸಮಸ್ಯೆಯೇ ಪ್ರಮುಖವಾಗಿ ಕಾಣುತ್ತಿದೆ. ಇವರು ಸಚಿವರಾಗಿದ್ದಾಗ ಸುಮಾರು 14 ಸಾವಿರ ಬಗರ್ಹುಕುಂ ಅಜರ್ಗಳನ್ನು ವಜಾಗೊಳಿಸಿದ್ದನ್ನು ಮರೆತು ಹೋದಂತಿದೆ. ತಾವು ಅಧಿಕಾರದಲ್ಲಿದ್ದಾಗ ಜನಸಾಮಾನ್ಯರ ಸಮಸ್ಯೆಗೆ ಸ್ಪಂದಿಸದೆ ಈಗ ಚುನಾವಣೆ ಗೆಲುವಿಗೆ ಬಗರ್ಹುಕುಂ, ಅರಣ್ಯಭೂಮಿ ಹಕ್ಕು ಕಾಯ್ದೆ ಹೆಸರು ಹೇಳಿಕೊಂಡು ಜನರನ್ನು ದಿಕ್ಕುತಪ್ಪಿಸುವ ರಾಜಕಾರಣ ಕಾಂಗ್ರೆಸ್ ಮಾಡುತ್ತಿದೆ. ಅಧಿಕಾರ ಇದ್ದಾಗ ಕ್ಷೇತ್ರದ ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸವನ್ನು ನಾನು ಪ್ರಾಮಾಣಿಕವಾಗಿ ಮಾಡಿದ್ದೇನೆ ಎಂದರು.
ಇಷ್ಟು ದಿನ ತಾವು ಗೆದ್ದೇ ಬಿಟ್ಟೆವು ಎಂದು ಬೀಗುತ್ತಿದ್ದ ಕಾಂಗ್ರೆಸ್ ಪಕ್ಷದವರಿಗೆ ಈಗ ಭೀತಿ ಆರಂಭವಾಗಿದೆ. ಅದಕ್ಕೆ ನನ್ನ ಬಗ್ಗೆ ಅಪಪ್ರಚಾರ ಮಾಡುವ ಮೂಲಕ ಮತ ಗಿಟ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ದೂರಿದರು.
ಜೆಡಿಎಸ್ ಪ್ರಬಲ: ಜಿಪಂ ಮಾಜಿ ಸದಸ್ಯ ಕೆ.ಎಂ. ಕೃಷ್ಣಮೂರ್ತಿ ಮಾತನಾಡಿ, ಜೆಡಿ(ಎಸ್) ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಗೋಪಾಲಕೃಷ್ಣ ಬೇಳೂರು ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಕ್ಷೇತ್ರದಲ್ಲಿ ಜೆಡಿಎಸ್ ಪ್ರಬಲವಾಗಿ ಬೆಳೆಯಲು ಅವಕಾಶ ಕಲ್ಪಿಸಿದ್ದಾರೆ. ಜಿಲ್ಲೆಯಲ್ಲಿ ಜೆಡಿಎಸ್ ಈ ಬಾರಿ ಅತಿಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಹೇಳಿದರು.
ಬಿಜೆಪಿ ಕಾಂಗ್ರೆಸ್ ಪ್ರಮುಖರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಜೆಡಿಎಸ್ ಸೇರ್ಪಡೆಗೊಂಡರು. ಕೆ. ಅರುಣಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಆನಂದಪುರಂ ಗ್ರಾಪಂ ಶಾಂತಮ್ಮ, ಗೌತಮಪುರ ಗ್ರಾಪಂ ಅಧ್ಯಕ್ಷೆ ಶೈಲಜ ಬಸವರಾಜ್, ಪ್ರಮುಖರಾದ ಬಸವರಾಜ್, ಈಶ್ವರಪ್ಪ ಗೌಡ, ಕೊಲ್ಲಪ್ಪ ಗೌಡ, ಚೌಡಪ್ಪ, ರೇವಪ್ಪ ಹೊಸಕೊಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

