29ಕ್ಕೆ ತಮಿಳು ಸಂಘಟನೆಗಳ ಸಮಾವೇಶ
ಶಿವಮೊಗ್ಗ: ಏ.29ರಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ತಮಿಳು ಸಂಘಟನೆಗಳ ಒಕ್ಕೂಟದ ಸಮಾವೇಶ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು.
ನಗರದ ಬಸವ ಕೇಂದ್ರ ಸಭಾಂಗಣದಲ್ಲಿ ಏ.22ರಂದು ಸಂಜೆ ಶಿವಮೊಗ್ಗ ತಮಿಳು ಯುವಕರ ಸೇವಾ ಸಂಘದ ಗೌರವಾಧ್ಯಕ್ಷ ಡಿ. ರಾಜಶೇಖರಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, ರಾಜ್ಯ ತಮಿಳು ಸಂಘಟನೆಗಳ ಒಕ್ಕೂಟದ ಸಂಚಾಲಕ ಎಂ.ಪಿ. ಸಂಪತ್, ತಮಿಳು ಯುವಕರ ಸಂಘದ ಉಪಾಧ್ಯಕ್ಷ ಎನ್. ಮಂಜುನಾಥ್, ತಮಿಳು ಸಂಘದ ಉಪಾಧ್ಯಕ್ಷ ಎಸ್. ಮಂಜುನಾಥ್ ಮತ್ತಿತರರು ಸಭೆಯಲ್ಲಿದ್ದರು.
ಈ ಸಂದರ್ಭದಲ್ಲಿ ಹಿರಿಯರಾದ ಮಾಣಿಕ್ಯಂ ಮೊದಲಿಯಾರ್, ರಾಮಕೃಷ್ಣಪ್ಪ, ಯುವ ಸದಸ್ಯ ಶರವಣ, ಷಣ್ಮುಖ, ರವಿಶಂಕರ, ರಮೇಶ್, ಪ್ರಭಾಕರ, ಮುರುಗ, ವಡಿವೇಲು, ಪ್ರಕಾಶ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
ಸಮಾವೇಶ ಯಶಸ್ವಿಯಾಗಿ ನೆರವೇರುವುದಕ್ಕೆ ಸಂಬಂಧಿಸಿದಂತೆ ಮುಖಂಡರು ಸುದೀರ್ಘ ಸಮಾಲೋಚನೆ ನಡೆಸಿದರು. ಸರಿ ಸುಮಾರು 6 ಸಾವಿರಕ್ಕೂ ಅಧಿಕ ಸಮಾಜ ಬಾಂಧವರು ಸ್ವಯಂಪ್ರೇರಿತವಾಗಿ ಈ ಸಮಾವೇಶದಲ್ಲಿ ಭಾಗವಹಿಸುತ್ತಿದ್ದು ಯಾವುದೇ ಅನಾನುಕೂಲವಾಗದಂತೆ ಎಚ್ಚರ ವಹಿಸಬೇಕು. ಈ ಹಿಂದೆ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಸಿದ ಜಿಲ್ಲಾ ತಮಿಳ ಬಾಂಧವರ ಸಮಾವೇಶದ ರೀತಿಯಲ್ಲಿ ನಡೆಯಬೇಕು. ಯಾವುದೇ ತೊಂದರೆ, ಗಡಿಬಿಡಿಗೆ ಆಸ್ಪದವಾಗದಂತೆ ಸಮಾವೇಶ ನಡೆಸಲು ಮುಖಂಡರು ಸಭೆಯಲ್ಲಿ ತೀರ್ಮಾನ ಕೈಗೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

