ಶಿವಮೊಗ್ಗ

ಅಕ್ರಮ ಮದ್ಯ ವಶ

Published On :

ಶಿವಮೊಗ್ಗ: ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿರುವ ಘಟನೆ ಬುಧವಾರ ಸೋಮಿನಕೊಪ್ಪ ರಸ್ತೆ ಬಳಿ ನಡೆದಿದೆ. ಎಂ.ಎಸ್. ಸಂತೋಷ್ ಬಂಧಿತ ಆರೋಪಿ. ಇವರು ಬುಧವಾರ ಬೆಳಿಗ್ಗೆ 10.30ಕ್ಕೆ ನಗರದ ಸೋಮಿನಕೊಪ್ಪದ ರಸ್ತೆಯಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಅಬಕಾರಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ 25.920 ಲೀಟರ್ ಮದ್ಯವನ್ನು ವಶಪಡಿಸಿಕೊಂಡು ಸಂತೋಷ್ ಅವರನ್ನು ಬಂಧಿಸಲಾಗಿದೆ. ಇದರ ಮೌಲ್ಯ ಸುಮಾರು 1,57,500 ಲಕ್ಷ ಎಂದು ಅಂದಾಜಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಅಬಕಾರಿ ನಿರೀಕ್ಷಕ ಕೆ.ಎಸ್. ರಾಜಶೇಖರ್,  ಉಪ ಆಯುಕ್ತ ರಾಜೇಂದ್ರ ಪ್ರಸಾದ್, ಉಪ ಅಧೀಕ್ಷಕ ಪವಾರ್, ವೇಣುಗೋಪಾಲ ಮತ್ತು  ಚರಣ್‌ರಾಜ್, ಮಧುಸೂದನ್,  ಅನಂತಕುಮಾರ್, ಸುಧಾಮಣಿ, ವಾಗೀಶ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.