ಕಾಂಗ್ರೆಸ್ಗೆ ವೀರಶೈವ ಮುಖಂಡರ ಬೆಂಬಲ
ಕಪ್ರವಾರ್ತೆ,ಹೊಸದುರ್ಗ, ಏ.24 ತಾಲೂಕಿನ ಕಸಬಾ ಹೋಬಳಿಯ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಜಿ. ಗೋವಿಂದಪ್ಪ ಮತ ಯಾಚಿಸಿದ ಸಂದರ್ಭದಲ್ಲಿ ಬಹಳಷ್ಟು ವೀರಶೈವ ಮುಖಂಡರು ಬೆಂಬಲ ಸೂಚಿಸಿದರು.
ವೀರಶೈವ ಸಮಾಜದ ಮುಖಂಡರಾದ ಚಿಕ್ಕಯಗಟಿ ಸುರೇಶ್ ಮಾತನಾಡಿ, ಅತ್ಯಂತ ಹಿಂದುಳಿದ ತಾಲೂಕಿನ ನಂಜುಂಡಪ್ಪ ವರದಿ ಅನ್ವಯ ತಾಲೂಕಿಗೆ ಬರಬೇಕಾದ ಅನುದಾನ ತರುವಲ್ಲಿ ಶಾಸಕರು ವಿಫಲವಾಗಿದ್ದು, ಸಾವಿರಾರು ಕೋಟಿ ರು. ಅನುದಾನ ಬಾರದಾಯಿತು. ಅತ್ಯಂತ ಹಿಂದುಳಿದ ತಾಲೂಕಿನ ಪಟ್ಟಿಯಲ್ಲಿ ಸೇರಿಸಲು ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ ಅವರ ಅಭಿವೃದ್ಧಿ ಚಿಂತನೆಯೇ ಸಾಕ್ಷಿ. ಮುಂದಾದರೂ ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್ಗೆ ಬೆಂಬಲಿಸಿ ಎಂದರು.
ಸಮಸ್ಯೆ ಬಗೆಹರಿಸಲು ಹೋರಾಟ: ಕಾಂಗ್ರೆಸ್ ಅಭ್ಯರ್ಥಿ ಗೋವಿಂದಪ್ಪ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಸಮಸ್ಯೆ ಇದ್ದು, ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ, ಸಾಮಾನ್ಯ ಜನರ ಸಂಕಷ್ಟಗಳಿಗೆ ಪರಿಹಾರ ಕೊಡಿಸಿ ಕೊಡುವ ನಿಟ್ಟಿನಲ್ಲಿ ಹೋರಾಟ ಮಾಡುವುದಾಗಿ ತಿಳಿಸಿದ ಅವರು, ಮತದಾರರು ಚಿಂತಿಸಿ ಅಭಿವೃದ್ಧಿ ಪರವಾಗಿ ಮತ ಚಲಾಯಿಸಬೇಕು.
ಈ ಸಂದರ್ಭದಲ್ಲಿ ವೀರಶೈವ ಸಮಾಜದ ಮುಖಂಡ ಮಲ್ಲಪ್ಪನಹಳ್ಳಿ ಈಶ್ವರಪ್ಪ, ಅರಳಿಹಳ್ಳಿ ಲೋಕೇಶ್ವರಪ್ಪ, ಆರ್. ತಮ್ಮಣ್ಣ, ಜಿಪಂ ಮಾಜಿ ಸದಸ್ಯ ದ್ಯಾಮಣ್ಣ, ಎಪಿಎಂಸಿ ಸಿದ್ದಪ್ಪ, ತಂಡಗದ ಮುದ್ದಪ್ಪ, ಉಪ್ಪಾರ ಸಮಾಜದ ತಾಲೂಕು ಅಧ್ಯಕ್ಷ ಎಂ.ಪಿ. ಶಂಕರ್, ಕಬ್ಬಳ ಗ್ರಾಪಂ ಅಧ್ಯಕ್ಷ ರವಿಕುಮಾರ್, ಪುರಸಭಾ ಸದಸ್ಯ ಎಚ್.ಪಿ. ಜಗದೀಶ್, ಮಾರಭಘಟ್ಟ ರವಿ, ಶೆಟ್ಟಿಹಳ್ಳಿ ಮಹೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಪೂಜಾರ್, ಅಬ್ದುಲ್ ವಾಮಿಕ್, ಕುಂದೂರು ಈಶ್ವರಪ್ಪ, ನೀಲಪ್ಪ. ಕೊಂಡಾಪುರದ ರಂಗನಾಥ್ ಸೇರಿದಂತೆ ಹಲವರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

