ಶಿವಮೊಗ್ಗ

ದೇವಪುರದಲ್ಲಿ ಗೂಳಿಹಟ್ಟಿ ಮತ ಯಾಚನೆ

Published On :

ಹೊಸದುರ್ಗ: ತಾಲೂಕಿನ ಮಾಡದಕೆರೆ ಹೋಬಳಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶಾಸಕ ಗೂಳಿಹಟ್ಟಿ ಶೇಖರ್ ಅಪಾರ ಬೆಂಬಲಿಗರೊಂದಿಗೆ ಮತ ಯಾಚಿಸಿದರು. ಮಾಡದಕೆರೆಯ ದೇವಪುರ ಮತ್ತಿತರ ಗ್ರಾಮಗಳಲ್ಲಿ ಮತ ಯಾಚಿಸಿ ಮಾತನಾಡಿದ ಅವರು, ಜಾತಿ ಭೇದ ಮರೆತು ಅಭಿವೃದ್ಧಿ ಕಾರ್ಯ ಮಾಡಿದ್ದೇನೆ. ಎಲ್ಲ ವರ್ಗಗಳ ಸಮುದಾಯ ಭವನ ನಿರ್ಮಿಸಲು ಅನುದಾನ ನೀಡಿದ್ದೇನೆ ಎಂದರು.
  ನಾನು ಯಾವುದೇ ಆಸೆ ಆಮಿಷಕ್ಕೆ ಬಲಿಯಾಗದೆ ಅಭಿವೃದ್ಧಿ ಕಾರ್ಯ ಮಾಡಿದ್ದೇನೆ. ಮುಂದೆಯೂ ಅಭಿವೃದ್ಧಿ ಕಾರ್ಯ ಮಾಡಲು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ನನಗೆ ಜನ ಬೆಂಬಲ ಇದ್ದೇ ಇರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಹಳ್ಳಿಗಳಲ್ಲಿ ವಿದ್ಯುತ್, ನೀರು, ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಿದ್ದು, ಕಳೆದ 5 ವರ್ಷದಲ್ಲಿ ಅನರ್ಹ ವರ್ಷ ಹೊರತು ಪಡಿಸಿದರೆ ನಂತರ ವಿಶೇಷ ಅನುದಾನದಲ್ಲಿ ರಸ್ತೆ, ಕುಡಿಯುವ ನೀರು ಸೇರಿದಂತೆ ದೇಗುಲ  ನಿರ್ಮಾಣಕ್ಕೆ ಹೆಚ್ಚಿನ ಅನುದಾನ ನೀಡಿದ್ದೇನೆ ಎಂದರು.
 ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಹೆಚ್ಚಿನ ಬೆಂಬಲವಿದ್ದು, ಮುಂದೆ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯ ಮಾಡಿ ಮಾದರಿ ತಾಲೂಕು ಮಾಡುವುದಾಗಿ ತಿಳಿಸಿದ ಅವರು, ತಾಲೂಕಿಗೆ ಮಾಡಿದ ಸೇವೆಯನ್ನು ಗುರುತಿಸಿ ನನಗೆ ಮತ ಹಾಕಲಿದ್ದಾರೆ ಎಂದರು. ವಕೀಲ ಕಲ್ಮಠ್, ಪ್ರಕಾಶಣ್ಣ, ಕರಿಯಪ್ಪ, ರಂಗಸ್ವಾಮಿ,  ಬೆನಕನಹಳ್ಳಿ ತಿಪ್ಪೇಶ್, ದುಗ್ಗಾವರದ ಜಯಣ್ಣ, ಹೊನ್ನೇನಹಳ್ಳಿ ಪರಮೇಶ್ವರಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.