ಶಿವಮೊಗ್ಗ

ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದರೆ ದೇಶಾದ್ಯಂತ ಗೆಲುವು: ಆಶಾರಾಣಿ

Published On :

ಚಿತ್ರದುರ್ಗ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಗೆದ್ದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಕಾಂಗ್ರೆಸ್ ಪಕ್ಷ ಸುಲಭವಾಗಿ ಗೆಲ್ಲಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಹಿಮಾಚಲ ಪ್ರದೇಶದ ಮಾಜಿ ಸಚಿವೆ, ವೀಕ್ಷಕಿ ಆಶಾ ರಾಣಿ ಅಭಿಪ್ರಾಯಪಟ್ಟರು.
 ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಪಕ್ಷದ ಮುಖಂಡರ ಸಭೆಯಲ್ಲಿ ಮಾತನಾಡಿ, ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಪಕ್ಷ ಸುಲಭವಾಗಿ ಅಧಿಕಾರಕ್ಕೆ ಬರಲಿದೆ ಎಂದು ಅವರು ಕಿವಿ ಮಾತು ಹೇಳಿದರು.
 ರಾಜ್ಯದ ಚಿತ್ರದುರ್ಗ, ತುಮಕೂರು, ಬೆಂಗಳೂರು ಮಂಡ್ಯ ಸೇರಿದಂತೆ 6 ಲೋಕಸಭಾ ಕ್ಷೇತ್ರಗಳಿಗೆ ತಮ್ಮನ್ನು ವೀಕ್ಷಕರನ್ನಾಗಿ ಸೋನಿಯಾ ಗಾಂಧಿ ನೇಮಕ ಮಾಡಿದ್ದಾರೆ. ಚುನಾವಣಾ ವಸ್ತುಸ್ಥಿತಿಯನ್ನು ಹೈಕಮಾಂಡ್‌ಗೆ ಕಳುಹಿಸಲಾಗುತ್ತದೆ ಎಂದರು.
ಇದೇ ವೇಳೆ ಕಾಂಗ್ರೆಸ್ ಮಹಿಳೆಯರು ಅವರನ್ನು ಮುತ್ತಿಕೊಂಡು ಕಾಂಗ್ರೆಸ್ ಪಕ್ಷ ಮಹಿಳೆಯರಿಗೆ ಹೆಚ್ಚಿನ ಟಿಕೆಟ್ ನೀಡದೆ ವಂಚಿಸಿದೆ. ಮುಂದೆ ಈ ರೀತಿಯಾಗದಂತೆ ಸೋನಿಯಾ ಗಾಂಧಿ ಅವರಲ್ಲಿ ಮನವರಿಕೆ ಮಾಡಿಕೊಡಿ ಎಂದರು.
 ಜಿಲ್ಲಾಧ್ಯಕ್ಷ ಎಂ.ಎ. ಸೇತುರಾಮ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಭವಿಷ್ಯವಿದ್ದು, ಎಲ್ಲರೂ ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಿನಿಂದ ದುಡಿದರೆ ಅಧಿಕಾರಕ್ಕೆ ಬರಲಿದೆ. ಭಿನ್ನಾಭಿಪ್ರಾಯದಿಂದ ಕಾಂಗ್ರೆಸ್ ಪಕ್ಷ ಅಧಿಕಾರದಿಂದ ವಂಚಿತವಾದರೆ ಕಾರ್ಯಕರ್ತರಿಗೂ ನಷ್ಟವಾಗಲಿದೆ ಎಂದು ಎಚ್ಚರಿಸಿದರು.
ಟಿಕೆಟ್ ವಂಚಿತ ವರ್ಗಗಳಿಗೆ ಮುಂದಿನ ದಿನದಲ್ಲಿ ನ್ಯಾಯ ಕೊಡಿಸಲಾಗುತ್ತದೆ, ಈಗ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವಂತೆ ಕರೆ ನೀಡಿದರು. ಜಯಮ್ಮ, ಆರತಿ ಶಿವಮೂರ್ತಿ, ಮೀನಾಕ್ಷಮ್ಮ, ಮೆಹಬೂಬ್, ವಸಂತಕುಮಾರಿ, ಮೋಕ್ಷಾ, ಉಮಾ ಶಿವಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.