ಅನಾಥ ಪ್ರಜ್ಞೆ ಕಾಡುತ್ತಿದೆ
ಜೋಗ್ಫಾಲ್ಸ್: ಸೊರಬ ಕ್ಷೇತ್ರಕ್ಕೆ ತಾಳಗುಪ್ಪ ಕ್ಷೇತ್ರವನ್ನು ಸೇರಿಸಿದ ಬಳಿಕ ಇಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಬರ ಎದುರಾಗಿದ್ದು ಜನರಿಗೆ ಅನಾಥ ಪ್ರಜ್ಞೆ ಕಾಡುತ್ತಿದೆ ಎಂದು ಸೊರಬ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ತಿಳಿಸಿದರು.
ಸಮೀಪದ ತಾಳಗುಪ್ಪ ಹೋಬಳಿಯ ಅತ್ತಿಸಾಲು, ಸೈದೂರು ಗ್ರಾಪಂ ವ್ಯಾಪ್ತಿಯ ಮತಯಾಚನೆ ಮಾಡಿ ಹಿರೇನಲ್ಲೂರಿನಲ್ಲಿ ಮಾತನಾಡಿ, ಕಳೆದ 10 ವರ್ಷಗಳಿಂದ ಸೊರಬ ಕ್ಷೇತ್ರದ ಜನರ ನಾಡಿಮಿಡಿತವನ್ನು ತಾವು ಅರಿತಿದ್ದು, ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರವೂ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ. ಬಗರ್ ಹುಕುಂ ಹೋರಾಟ, ವಿದ್ಯುತ್ ಸಮಸ್ಯೆಗಳಿಗೆ ಸ್ಪಂದಿಸುವುದನ್ನು ಮಾನ್ಯ ಬಂಗಾರಪ್ಪನವರಿಂದ ತಾವು ಕಲಿತಿದ್ದು, ಇದನ್ನೇ ಮುಂದಿನ ದಿನಗಳಲ್ಲೂ ಮುಂದುವರೆಸಿಕೊಂಡು ಹೋಗುವುದಾಗಿ ತಿಳಿಸಿದರು. ಶಿವಾನಂದ್ ಕುಗ್ವೆ, ಅನಂತ್ ಕಲುವೆ, ಶಾಂಭವಿ ಪರಮೇಶ್ವರ್, ಹುಚ್ಚಪ್ಪ, ಲೋಕೇಶ್ ಗಾಳಿಪುರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

