ಶಿವಮೊಗ್ಗ

ಪಿಯುಸಿ ಪ್ರವೇಶ ಪರೀಕ್ಷೆ: ಮೊಬೈಲ್ ನಿಷೇಧ

Published On :

ಕ.ಪ್ರ.ವಾರ್ತೆ, ದಾವಣಗೆರೆ, ಏ.24
ಮೇ1 ಹಾಗೂ 2 ರಂದು ನಡೆಯಲಿರುವ ಪಿಯುಸಿ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಪ್ರವೇಶ ಪತ್ರ ಬಿಟ್ಟರೆ ಬೇರೆ ಯಾವುದೇ ಸಲಕರಣೆಗಳನ್ನು ಹಾಗೂ ಮೊಬೈಲ್ ಕಡ್ಡಾಯವಾಗಿ ನಿಷೇಧ ಮಾಡಲಾಗಿದ್ದು, ಮೊಬೈಲ್ ಕೊಠಡಿಗೆ ತಂದರೆ ಪರೀಕ್ಷಾ ಮೇಲ್ವಿಚಾರಕರು ಜವಾಬ್ಧಾರಿ ತೆಗೆದುಕೊಳ್ಳಬಾರದು ಎಂದು ಜಿಲ್ಲಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ ಅವರು ತಿಳಿಸಿದ್ದಾರೆ.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ದಾವಣಗೆರೆ ನಗರದಲ್ಲಿ 13 ಪರೀಕ್ಷಾ ಕೇಂದ್ರಗಳಿದ್ದು, ಒಟ್ಟು 5,776 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಮಕ್ಕಳಿಗೆ ಪರೀಕ್ಷೆ ಬರೆಯಲು ಅನುಕೂಲವಾಗುವ ರೀತಿಯಲ್ಲಿ ಅಧಿಕಾರಿಗಳು ಕೆಲಸ ನಿರ್ವಹಿಸಬೇಕು ಎಂದು ಅವರು ಸೂಚಿಸಿದರು.
ಕೊಠಡಿ ಮೇಲ್ವಿಚಾರಕರಿಗೆ ಉತ್ತಮ ತರಬೇತಿ ನೀಡಿ ಅನುಭವ ನುರಿತ ಅಧ್ಯಾಪಕರನ್ನು ಆಯ್ಕೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಕೊಠಡಿಯಲ್ಲಿ ಗಾಳಿ, ಬೆಳಕು ಇರುವಂತಹ ಕೊಠಡಿಗಳನ್ನು ಆಯ್ಕೆ ಮಾಡಿಕೊಳ್ಳುವಂತೆ ಹಾಗೂ ಒಂದು ಕೊಠಡಿಗೆ 16 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಗೆ ಕುಳಿತುಕೊಳ್ಳಲು ಅನುವಾಗುವಂತೆ ಗಮನ ಹರಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಂಗನಾಥ್, ಅನುಭವ ಹೊಂದಿದ ಅಧ್ಯಾಪಕರನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು ಪರೀಕ್ಷಾ ಕೊಠಡಿಗೆ ಕಲಾ ವಿಭಾಗದ ಅಧ್ಯಾಪಕರನ್ನು ಮಾತ್ರ ಆಯ್ಕೆ ಮಾಡಿ ಹಾಕಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಅಪರ ಜಿಲ್ಲಾಧಿಕಾರಿ ದೊಡ್ಡಪ್ಪ, ತಾಲೂಕಿನ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕಾಲೇಜಿನ ಪ್ರಾಂಶುಪಾಲರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.