ಶಿವಮೊಗ್ಗ

ಬೆಂಕಿ ಮುಂಜಾಗ್ರತಾ ತರಬೇತಿ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ, ಏ.24
ಅಗ್ನಿಶಾಮಕ ಸೇವಾ ಸಪ್ತಾಹದ ಅಂಗವಾಗಿ ಭದ್ರಾವತಿಯ ಹೊಳೆಹೊನ್ನೂರು ಗ್ರಾಮಾದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಶಿಬಿರದಲ್ಲಿ ಭಾರತೀಯ ಯುವ ರೆಡ್‌ಕ್ರಾಸ್ ಘಟಕದ ಎಲ್ಲಾ ಶಿಬಿರಾರ್ಥಿಗಳಿಗೆ ಮತ್ತು ಕಾಲೇಜಿನ ಎಲ್ಲಾ ಅಧ್ಯಾಪಕ ವೃಂದದವರಿಗೆ ಬೆಂಕಿ ಮುಂಜಾಗ್ರತಾ ಕ್ರಮಗಳ ಕುರಿತು ಉಪನ್ಯಾಸ ನೀಡಲಾಯಿತು.
ಮನೆಗಳಲ್ಲಿ ಉಂಟಾಗುವ ಸಣ್ಣ- ಪುಟ್ಟ ಬೆಂಕಿ ಆಕಸ್ಮಿಕಗಳನ್ನು ಹೇಗೆ ನಿಯಂತ್ರಿಸಬೇಕು, ಗ್ರಾಮೀಣ ಪ್ರದೇಶದಲ್ಲಿ ಉಂಟಾಗುವ ಬೆಂಕಿ ದುರಂತಗಳನ್ನು ಹೇಗೆ ತಡೆಗಟ್ಟಬೇಕು, ಎಲ್‌ಪಿಜಿ ಗ್ಯಾಸ್‌ನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡುವ ಬಗ್ಗೆ ತಿಳಿಸಿಕೊಡಲಾಯಿತು.
ಈ ವೇಳೆ ಮಾತನಾಡಿದ ಕಾಲೇಜು ಪ್ರಾಂಶುಪಾಲರಾದ ಡಾ.ಜೆ.ಜೆ. ಜಯಂತಿ, ಇಂದು ಅಗ್ನಿದುರಂತಗಳು ಮತ್ತು ರಸ್ತೆ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ರೀತಿ ದುರಂತಗಳು ಎಷ್ಟೋ ಬಾರಿ ಘಟಿಸಿದರೂ ಎಚ್ಚೆತ್ತುಕೊಳ್ಳಲು ನಾವುಗಳು ವಿಫರಾಗಿದ್ದೇವೆ. ಆದ್ದರಿಂದ ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಇಂತಹ ಕಾರ್ಯಕ್ರಮಗಳು ಪ್ರಯೋಜನಕಾರಿಯಾಗಿವೆ ಎಂದರು.
ಇದೇ ವೇಳೆ ಅಗ್ನಿಶಮನ ನಂದಕಗಳನ್ನು ಬಳಸುವ ಬಗೆಯನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಲಾಯಿತು.
ಈ ಕಾರ್ಯಕ್ರಮದಲ್ಲಿ ರೈತ ಸಂಘದ ಮುಖಂಡ ಕಡಿದಾಳ ಶ್ಯಾಮಣ್ಣ, ಭಾರತೀಯ ರೆಡ್‌ಕ್ರಾಸ್ ಯುವ ಘಟಕದ ಅಧಿಕಾರಿ ಡಾ. ಕುಮಾರ್, ಕೆ. ಶಿವಕುಮಾರ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.