ಶಿವಮೊಗ್ಗ

ಕಾಂಗ್ರೆಸ್ ಅಭ್ಯರ್ಥಿ ಪ್ರಕರಣ ದಾಖಲು

Published On :

ಶಿವಮೊಗ್ಗ: ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ. ಪ್ರಸನ್ನಕುಮಾರ್ ವಿರುದ್ಧ ಚುನಾವಣಾ ಆಯೋಗ ಎರಡು ಪ್ರಕರಣ ದಾಖಲಿಸಿಕೊಂಡಿದೆ.
  ಮತಯಾಚನೆ ವೇಳೆ ಮತದಾರರಿಗೆ ಪೆನ್ನು, ಕ್ಯಾಲೆಂಡರ್ ಮುಂತಾದ ವಸ್ತುಗಳನ್ನು ವಿತರಿಸುತ್ತಿದ್ದಾರೆ. ಈ ಮೂಲಕ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಜೊತೆಗೆ ಪ್ರಚಾರಕ್ಕೆ ಬಳಸುತ್ತಿರುವ ಕರಪತ್ರಗಳಲ್ಲಿ ಮುದ್ರಕರ ವಿವರ, ಪ್ರತಿಗಳ ವಿವರಗಳನ್ನು ಮುದ್ರಿಸಿಲ್ಲ ಎಂದು ಎ.ಎಸ್. ಗೋಪಿನಾಥ್ ಎಂಬುವವರು ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಚಲಿಸುತ್ತಿರುವ ಆಟೋಗೆ ಧ್ವನಿವರ್ಧಕ ಅಳವಡಿಸಿ ಪ್ರಚಾರ ಮಾಡಿದ ಸಂಬಂಧ ಪ್ರಸನ್ನಕುಮಾರ್ ವಿರುದ್ಧ ಚುನಾವಣಾ ಆಯೋಗ ದೂರು ದಾಖಲಿಸಿಕೊಂಡಿದೆ.
 ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಕೆ.ಬಿ. ಪ್ರಸನ್ನ ಕುಮಾರ್‌ಗೆ ನೋಟಿಸ್ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.