ಇಂದು ವಾರ್ಷಿಕೋತ್ಸವ
ಶಿವಮೊಗ್ಗ: ಪಿಇಎಸ್ಐಟಿಎಂ ಕಾಲೇಜಿನ ವಾರ್ಷಿಕೋತ್ಸವ ಏ.27ರಂದು ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಸಂಜೆ 5 ಗಂಟೆಗೆ ನಡೆಯಲಿದೆ. ಮನೋವೈದ್ಯ ಅಶೋಕ್ ಪೈ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಿಇಎಸ್ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಸಂಸದ ಬಿ.ವೈ. ರಾಘವೇಂದ್ರ ವಹಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ್ಚಂದ್ರ ಮೋಹನ್ ಉಪಸ್ಥಿತರಿರುವರು. 26ರಂದು ಸಾಂಪ್ರದಾಯಿಕ ವೇಷಭೂಷಣ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಕಾಲೇಜಿನ ದಿನಾಚರಣೆ ಸಂದರ್ಭದಲ್ಲಿ ಎಂಜಿನಿಯರಿಂಗ್ ವಿವಿಧ ವಿಭಾಗಗಳು ಹಾಗೂ ಎಂಬಿಎ ವಿಭಾಗದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದವರಿಗೆ ಅಭಿನಂದಿಸಲಾಗುವುದು ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
ಸಂತಾಪ
ಶಿವಮೊಗ್ಗ: ಜನತಾದಳ ನಗರಾಧ್ಯಕ್ಷ ಎಚ್.ವಿ. ಮಹೇಶ್ವರಪ್ಪನವರ ಪತ್ನಿ ಸುವರ್ಣಮ್ಮ (68) ಗುರುವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಸುವರ್ಣಮ್ಮ ನಿಧನಕ್ಕೆ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘ, ಬಸವೇಶ್ವರಸ್ವಾಮಿ ಪಟ್ಟಣ ಪತ್ತಿನ ಸಹಕಾರ ಸಂಘ, ಬಸವೇಶ್ವರ ಅಕಾಡೆಮಿ ಆಫ್ ಎಜುಕೇಷನ್, ವೀರಶೈವ ಕಲ್ಯಾಣಮಂದಿರ, ಎನ್ಡಿವಿ ಹಾಸ್ಟೆಲ್, ವಿವಿಧ ಅಂಗಸಂಸ್ಥೆಗಳ ಪದಾಧಿಕಾರಿಗಳು, ಆಡಳಿತ ಮಂಡಳಿ ನಿರ್ದೇಶಕರು, ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

