ಎಲ್ಲರ ಸಹಕಾರದಿಂದ ಗೆಲವು ಸಾಧ್ಯ; ಕಾಗೋಡು
ಸಾಗರ: ಚುನಾವಣೆ ಎಂದರೆ ಯುದ್ಧ ಇದ್ದಂತೆ. ಯುದ್ಧವನ್ನು ಗೆಲ್ಲುವ ಚಾಣಾಕ್ಷತನವನ್ನು ಕಾರ್ಯಕರ್ತರು ಬೆಳೆಸಿಕೊಳ್ಳಬೇಕು. ಎಲ್ಲರ ಸಹಕಾರದಿಂದ ಮಾತ್ರ ಯದ್ಧದಲ್ಲಿ ಗೆಲವು ಸಾಧ್ಯ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕಾಗೋಡು ತಿಮ್ಮಪ್ಪ ಹೇಳಿದರು.
ಇಲ್ಲಿನ ಗಾಂಧಿಮಂದಿರದಲ್ಲಿ ವಿವಿಧ ಪಕ್ಷಗಳಿಂದ ಕಾಂಗ್ರೆಸ್ಗೆ ಸೇರ್ಪಡೆಗೊಂಡವರನ್ನು ಬರಮಾಡಿಕೊಂಡು, ಯುದ್ಧಕಾಲದಲ್ಲಿ ಶಸ್ತ್ರಾಭ್ಯಾಸ ಸಲ್ಲದು. ನಿರಂತರವಾಗಿ ಕ್ಷೇತ್ರವ್ಯಾಪ್ತಿಯ ಜನರೊಂದಿಗೆ ಸಂಪರ್ಕ ಇರಿಸಿಕೊಂಡು ಜನರ ಸಮಸ್ಯೆಗೆ ಸ್ಪಂದಿಸಿದರೆ, ಚುನಾವಣೆ ಸಂದರ್ಭದಲ್ಲಿ ಮತದಾರರ ಮನವೊಲಿಸುವುದು ಸುಲಭ ಎಂದರು.
ಕಾಂಗ್ರೆಸ್ ಯುವ ಜನರನ್ನು ಚುನಾವಣೆ ಸಂದರ್ಭದಲ್ಲಿ ಮಾತ್ರ ಬಳಸಿಕೊಳ್ಳುತ್ತಿದೆ ಎಂಬ ಆರೋಪ ಇದ್ದು, ಯುವಕರು ಪಕ್ಷದಲ್ಲಿ ಕ್ರಿಯಾಶೀಲರಾಗಿದ್ದು, ಸ್ಥಳೀಯ ಸಮಸ್ಯೆಗಳ ನಿವಾರಣೆಗೆ ಗಮನ ಹರಿಸಬೇಕು. ಇದರಿಂದಾಗಿ ಪಕ್ಷದ ಮೇಲಿರುವ ಈ ಆರೋಪ ದೂರಮಾಡಬಹುದು. ಈಗ ಹುಟ್ಟಿಕೊಂಡಿರುವ ಅನೇಕ ಪಕ್ಷಗಳಿಗೆ ಯಾವುದೇ ಸಿದ್ಧಾಂತವಾಗಲಿ, ಬಡವರ, ರೈತರ, ಅಲ್ಪಸಂಖ್ಯಾತರ, ಹಿಂದುಳಿದವರ ಪರವಾಗಿ ಯಾವುದೆ ಕಾಳಜಿ ಇಲ್ಲ ಎಂದರು.
ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣಕ್ಕೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮತದಾರರಲ್ಲಿ ಕಾರ್ಯಕರ್ತರು ಮನವಿ ಮಾಡಬೇಕು ಎಂದು ಹೇಳಿದರು. ಬಿಎಸ್ಆರ್ ಕಾಂಗ್ರೆಸ್ ಪಕ್ಷದ ತಿಮ್ಮಪ್ಪ, ಜೆಡಿಎಸ್ನ ಯಶೋಧರ, ಬಿಜೆಪಿಯ ಗಂಗಾಧರ ಕಾಂಗ್ರೆಸ್ಗೆ ಸೇರ್ಪಡೆಗೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

