ಶಿವಮೊಗ್ಗ

ಮತದಾನ ಹೆಚ್ಚಳಕ್ಕೆ ಸಹಿ ಸಂಗ್ರಹ

Published On :

ಕ.ಪ್ರ.ವಾರ್ತ್ಣೆಶಿವಮೊಗ್ಗ್ಣಏ.27
ಮೇ 5ರಂದು ನಡೆಯಲ್ಲಿರುವ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸಲು ನಗರದ ಕುವೆಂಪು ರಂಗಮಂದಿರದ ಮುಂಭಾಗ ಜಿಲ್ಲಾಡಳಿತ ಶನಿವಾರ ಸಹಿ ಸಂಗ್ರಹ ಅಭಿಯಾನ ಆಯೋಜಿಸಿತ್ತು.
 ಸುಮಾರು 100 ಅಡಿ ಉದ್ದದ ಬೃಹತ್ ಕ್ಯಾನ್ವಸ್ ಮೇಲೆ ಸಹಿ ಸಂಗ್ರಹಿಸುವ ಮೂಲಕ ಮತದಾರರು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಪ್ರೇರೆಪಿಸಲಾಯಿತು.
 ಸಹಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್, ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ನಾವೆಲ್ಲರೂ ನಿರ್ಭೀತರಾಗಿ ಯಾವುದೇ ಆಮಿಷಗಳಿಗೆ ಒಳಗಾಗದೇ ಮತದಾನ ಮಾಡಬೇಕು. ಮತದಾನ ಪ್ರತಿಯೊಬ್ಬರ ಹಕ್ಕು. ಯಾವುದೇ ಪಕ್ಷ ಅಥವಾ ವ್ಯಕ್ತಿಯನ್ನು ಆಯ್ಕೆ ಮಾಡಲು ಅವಕಾಶವಿದೆ ಎಂದರು.
ಜಾಗೃತಿಗಾಗಿ ಕಾರ್ಯಕ್ರಮ: ಈ ನಿಟ್ಟಿನಲ್ಲಿ ಚುನಾವಣಾ ಆಯೋಗ ಮತದಾರರಲ್ಲಿ ಜಾಗೃತಿ ಮೂಡಿಸಲು ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ. ಕಳೆದ ಬಾರಿ ಚುನಾವಣೆಯಲ್ಲಿ ಶೇ.56 ಮತದಾನ ನಡೆದಿದ್ದು, ಈ ಬಾರಿ ಶೇ.80 ಮತದಾನ ನಡೆಯಬೇಕೆಂಬ ಉದ್ದೇಶದಿಂದ ಸಹಿ ಸಂಗ್ರಹ ಅಭಿಯಾನ ಆಯೋಜಿಸಲಾಗಿದೆ ಎಂದರು.
ಇದೇ ವೇಳೆ ನೂರಾರು ಮತದಾರರು ಸಹಿ ಮಾಡಿದರು.
  ಕುವೆಂಪು ವಿವಿ ಕುಲಪತಿ ಪ್ರೊ. ಎಸ್.ಎ. ಬಾರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಹರಿಕುಮಾರ್, ವಾರ್ತಾಧಿಕಾರಿ ಹಿಮಂತ್ ರಾಜ್, ರಾಜಣ್ಣ, ರಾಮಚಂದ್ರ ಮೊದಲಾದವರು ಇದ್ದರು.
ಮಕ್ಕಳಿಂದ ಸ್ಕೇಟಿಂಗ್ ರೋಡ್ ಶೋ: ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ತುಂಗಾ ಎಜ್ಯುಕೇಷನಲ್ ಮತ್ತು ಚಾರಿಟಬಲ್ ಟ್ರಸ್ಟ್ ಹಾಗೂ ಹಾಟ್ ವ್ಹೀಲ್ಸ್ ರೋಲರ್ ಸ್ಕೇಟಿಂಗ್ ಕ್ಲಬ್ ಆಶ್ರಯದಲ್ಲಿ ನಗರದ ಬೆಕ್ಕಿನಕಲ್ಮಠ ಸರ್ಕಲ್‌ನಲ್ಲಿ ಮಕ್ಕಳಿಂದ ಸ್ಕೇಟಿಂಗ್ ರೋಡ್ ಶೋ ಏರ್ಪಡಿಸಿತ್ತು.
 5 ರಿಂದ 18 ವರ್ಷದ ಯುವಕ, ಯುವತಿಯರು ಕಾಲಿಗೆ ಸ್ಕೇಟಿಂಗ್ ಕಟ್ಟಿಕೊಂಡು ಬೆಕ್ಕಿನಕಲ್ಮಠ ಸರ್ಕಲ್‌ನಿಂದ ಬಿಎಚ್ ರಸ್ತೆ ಮೂಲಕ ಹೊರಟು ರಸ್ತೆಯಲ್ಲಿ ಸಂಚಾರ ಮಾಡುವ ಎಲ್ಲಾ ಸಾರ್ವಜನಿಕರಿಗೆ ಮತದಾನ ಮಾಡಿ ಭವಿಷ್ಯ ರೂಪಿಸಿ ಎಂದು ಹೇಳುವ ಮೂಲಕ ಮತದಾನ ಜಾಗೃತಿ ಮೂಡಿಸಿದರು
 ಕಾರ್ಯಕ್ರಮದಲ್ಲಿ ತುಂಗಾ ಎಜ್ಯುಕೇಷನಲ್ ಮತ್ತು ಚಾರಿಟಬಲ್ ಟ್ರಸ್ಟ್ ಗೌರವಾಧ್ಯಕ್ಷ ಫೈರೋಜ್ ಖಾನ್, ಒಲಂಪಿಕ್ ಅಸೋಸಿಯೇಷನ್ ಕಾರ್ಯದರ್ಶಿ ಕೆ.ಎಸ್. ಶಶಿ, ಹಾಟ್ ವೀಲ್ ರೋಲರ್ಸ್ ಸ್ಕೇಟಿಂಗ್ ಕ್ಲಬ್‌ನ ಗೌರವ ಅಧ್ಯಕ್ಷ ಜಿ. ಪದ್ಮನಾಭ್ ಮೊದಲಾದವರು ಈ ಸಂದರ್ಭದಲ್ಲಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.